ಜುಲೈನಲ್ಲಿ ನೂತನ ಸರ್ಕಾರದ ಬಜೆಟ್ ಮಂಡನೆ; ಸಿಎಂ ಸಿದ್ದರಾಮಯ್ಯ ಘೋಷಣೆ

Date:

  • ಆರ್ಥಿಕ ಲೆಕ್ಕಾಚಾರಗಳನ್ನು ನೋಡಿಕೊಂಡು ನೂತನ ಬಜೆಟ್ ಮಂಡನೆ
  • ಅಧಿಕಾರ ಸ್ವೀಕರಿಸಿ ಮೊದಲ ದಿನವೇ ಜನಪರ ಯೋಜನೆಗಳ ಜಾರಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೇ ಜುಲೈ ತಿಂಗಳಿನಲ್ಲಿ ತನ್ನ ಮೊದಲ ಬಜೆಟ್ ಮಂಡನೆಗೆ ಸಿದ್ದವಾಗುತ್ತಿದೆ.

ಈ ಕುರಿತು ಖುದ್ದು ಸಿಎಂ ಮಾಹಿತಿ ನೀಡಿದ್ದು, ʼಕೈʼ ಸರ್ಕಾರದ ಮೊದಲ ಹಾಗೂ ವಿಧಾನಮಂಡಲದ ಮಳೆಗಾಲದ ಅಧಿವೇಶನ ಜುಲೈನಲ್ಲಿ ನಡೆಯಲಿದೆ. ಈ ಸಂದರ್ಭದಲ್ಲೇ ಹೊಸ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಇದೇ 22ರಿಂದ 24 ರವರೆಗೆ ಮೂರು ದಿನಗಳ ಕಾಲ ಅಧಿವೇಶನ ಕರೆಯಲಾಗುವುದು, ಜುಲೈ ತಿಂಗಳಲ್ಲಿ ಆಯವ್ಯಯ ಮಂಡಿಸಲಾಗುವುದು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಆದೇಶ ನೀಡಿರುವ ಸರ್ಕಾರ ಈಗ ಅದರ ಆರ್ಥಿಕ ಲೆಕ್ಕಾಚಾರದ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ.

ಈ ಬಗ್ಗೆಯೂ ಮಾಹಿತಿ ನೀಡಿರುವ ಸಿದ್ದರಾಮಯ್ಯ, ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ಗಳನ್ನು ಉಚಿತವಾಗಿ ನೀಡಲು ತಿಂಗಳಿಗೆ ₹1200 ಕೋಟಿ ಅನುದಾನದ ಅಗತ್ಯವಿದೆ.

ಪ್ರತಿ ಮನೆಯ ಒಡತಿಗೆ ಮಾಸಿಕ ₹2000, ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ₹3,000 ಹಾಗೂ ಡಿಪ್ಲೊಮಾ ಪಾಸಾದವರಿಗೆ ₹1500 ಯುವನಿಧಿಯಡಿ ನೀಡಲಾಗುವುದು.

ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇವುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಸ್ತೃತ ರೂಪುರೇಷೆ ಸಿದ್ಧಪಡಿಸಲಾಗುವುದು.

ಇಂದಿರಾ ಕ್ಯಾಂಟೀನ್‌ಗಳ ಪುನರಾರಂಭ ಮಾಡಲಾಗುವುದು. ಹಾಗಾಗಿ ಇವುಗಳ ಸದ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಹೇಳಿದರು.

ಹಿಂದಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 2023-24ನೇ ಸಾಲಿಗಾಗಿ ₹3 ಲಕ್ಷ ಕೋಟಿಗಳ ಭಾರೀ ಆಯವ್ಯಯ ಮಂಡಿಸಿತ್ತು. ಇದರಲ್ಲಿ ₹77,750 ಕೋಟಿ ಸಾಲ ಪಡೆಯುವುದಾಗಿ ತಿಳಿಸಿತ್ತು.

ಬಹಿರಂಗ ಮಾರುಕಟ್ಟೆಯಿಂದ ₹70,295 ಕೋಟಿ ಸಾಲವನ್ನು, ಕೇಂದ್ರದಿಂದ ₹6,254 ಕೋಟಿ, ಎನ್ಎಸ್ಎಸ್ಎಸ್ಎಫ್, ಎನ್‌ಸಿಡಿಸಿ ಮತ್ತು ಆರ್‌ಐಡಿಎಫ್‌ಗಳಿಂದ ₹1,201 ಕೋಟಿ ಸಾಲ ಪಡೆಯುವುದಾಗಿ ಬೊಮ್ಮಾಯಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ?:4 ಲಕ್ಷ ಕೋಟಿ ಕೊಟ್ಟರೂ 5 ಸಾವಿರ ಕೋಟಿ…

ಹಾಗೆಯೇ 2023-24ರ ಕೊನೆಗೆ ರಾಜ್ಯ ಸರಕಾರದ ಒಟ್ಟು ಸಾಲ ₹5.64,896 ಕೋಟಿಗಳಾಗುತ್ತದೆ. ಇದು ಜಿಎಸ್‌ಡಿಪಿಯ ಶೇ. 24.20ರಷ್ಟಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಈಗ ಈ ಎಲ್ಲ ಲೆಕ್ಕಾಚಾರಗಳನ್ನು ಪರಾಮರ್ಶಿಸಿ ಪುನರ್ ರೂಪಿಸಿ ನಾಗರಿಕರಿಗೆ ಹೊರೆಯಾಗದ ರೀತಿ ನೂತನ ಬಜೆಟ್ ಮಂಡಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ನೂತನ ಸಂಪುಟ ರಚನೆ ಬಳಿಕ ಇಲಾಖೆ ಸಚಿವರ ವಿಚಾರ ಆಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆ ಬಜೆಟ್ ರೂಪುರೇಷೆಯನ್ನು ಸರ್ಕಾರ ರಚಿಸಲಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

'ಕೇಂದ್ರ ಸರ್ಕಾರಕ್ಕೆ 9 ವರ್ಷ, ನರೇಂದ್ರ ಮೋದಿ ಆಡಳಿತ ಮುಂದುವರೆಯಲಿʼ 'ಐದು ಗ್ಯಾರಂಟಿಗಳ...

ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ ಸಿಎಂ ಹೊಸ ಸಚಿವರಿಗೆ ಶಕ್ತಿ ಸೌಧದಲ್ಲಿ...

ಆರ್‌ಎಸ್‌ಎಸ್‌-ಬಜರಂಗದಳದ ದಲಿತರು, ಶೂದ್ರರನ್ನು ಸೆಳೆಯಬೇಕಿದೆ: ಸತೀಶ್‌ ಜಾರಕಿಹೊಳಿ

ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ ದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ...