ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

Date:

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.

ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ ಸಂಸತ್ ಭವನ ‘ಸೆಂಟ್ರಲ್ ವಿಸ್ಟಾ’ದಲ್ಲಿ ಇದೇ ಮೊದಲ ಸಲ ಮಾತನಾಡಿದ್ದಾರೆ. ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಸರ್ಕಾರವು ಆಹ್ವಾನಿಸಿರಲಿಲ್ಲ. ಇದು ದೇಶಾದ್ಯಂತ ವಿವಾದಕ್ಕೂ ಕಾರಣವಾಗಿತ್ತು.

ಉದ್ಘಾಟನೆಯ ಸಂದರ್ಭದಲ್ಲಿ ಬಳಸಲಾಗಿದ್ದ ‘ಸೆಂಗೋಲ್’ ಅನ್ನು ಕೂಡ ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣ ಪೀಠದ ಮುಂದೆ ತಂದು ಇಡಲಾಯಿತು. ರಾಷ್ಟ್ರಪತಿಗಳು ಕೇಂದ್ರ ಸರ್ಕಾರದ ಯೋಜನೆ, ಸಾಧನೆ ಹಾಗೂ ದೇಶದ ಆರ್ಥಿಕತೆಯ ವಿವರಗಳನ್ನು ಓದಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗುರುವಾರ(ಫೆ.1) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಇದು ನಿರ್ಮಲಾ ಅವರು ಮಂಡಿಸಿರುವ ಆರನೇ ಬಜೆಟ್ ಆಗಿದೆ. ಲೋಕಸಭಾ ಚುನಾವಣೆ ಎಪ್ರಿಲ್-ಮೇನಲ್ಲಿ ನಡೆಯಲಿರುವುದರಿಂದ, ವಿತ್ತ ಸಚಿವೆ ಮಧ್ಯಂತರ ಬಜೆಟ್‌ ಮಂಡಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ರಚನೆಯಾಗಲಿರುವ ನೂತನ ಸರಕಾರವು ಪೂರ್ಣ ಪ್ರಮಾಣದ ಬಜೆಟನ್ನು ಮಂಡಿಸಲಿದೆ.

ವಿಪಕ್ಷಗಳ ಸಂಸದರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ!

ಸಂಸತ್‌ನ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಸಂಪ್ರದಾಯ ಎಂಬಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ವೇಳೆ, ವಿಪಕ್ಷಗಳ ಸಂಸದರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ನೀಡಿದ್ದು, ಅಶಿಸ್ತು ತೋರದಂತೆ ತಿಳಿಸಿದ್ದಾರೆ.

“ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಕೆ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ. ಇದು ಅವರ ಅಭ್ಯಾಸವಾಗಿರಬಹುದು, ಆದರೆ, ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು” ಎಂದು ಹೇಳಿದರು.

ಇದೇ ವೇಳೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ಮೋದಿ, “ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾವೆಲ್ಲರೂ ನಾರಿ ಶಕ್ತಿಗೆ ಸಾಕ್ಷಿಯಾಗಿದ್ದೇವೆ. ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಾಳೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್​​​ ಮಂಡಿಸಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...