ಬಜೆಟ್‌ ಅಧಿವೇಶನ | ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗಿಯಾದ ಬಿಜೆಪಿ ಸದಸ್ಯರು

Date:

ವಿಧಾನ ಮಂಡಲದ ಜಂಟಿ‌ ಅಧಿವೇಶನ ಸೋಮವಾರ ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, ಬಿಜೆಪಿ ಸದಸ್ಯರು ಮೊದಲ ದಿನವೇ ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗವಹಿಸಿದರು.

- Advertisement -

ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಹಬ್ಬಿ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೆ ಅಧಿವೇಶನಕ್ಕೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗವಹಿಸಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಮೂಲಕ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಮತ್ತೆ ಹಾರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ ಎನ್ನಲಾಗಿದೆ. ಇದರ ಪ್ರತೀಕವೆಂಬಂತೆ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆಗೆ ಆಗಮಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ರಾಜ್ಯಪಾಲರನ್ನು ಸ್ವಾಗತಿಸಿದರು.

ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು. ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀರಾಂ ಘೋಷಣೆ ಕೂಗಿದರೆ, ಇದಕ್ಕೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಸದಸ್ಯರು ಜೈ ಭೀಮ್ ಘೋಷಣೆ ಕೂಗಿದರು. ಆದರೆ ಇವರಿಬ್ಬರ ನಡುವೆ ಜೆಡಿಎಸ್ ಸದಸ್ಯರು ಯಾವುದೇ ಘೋಷಣೆ ಕೂಗದೆ ತಟಸ್ಥರಾದರು.

ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...