ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

Date:

ರಾಜ್ಯದಲ್ಲಿ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಎಲೆ ಚುಕ್ಕಿ ಮತ್ತು ಹಳದಿ ರೋಗವನ್ನು ನಿಯಂತ್ರಣ ಮಾಡಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದ್ದು, ಪರಿಹಾರ ನೀಡುವುದು ಸಾಧ್ಯವಿಲ್ಲ” ಎಂದರು.

“ಎಲೆ ಚುಕ್ಕಿ ಮತ್ತು ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ರೋಗ ನಿಯಂತ್ರಣಕ್ಕೆ ಔಷಧಿ‌ ವಿತರಣೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಡಿಕೆ ಎಲೆ ಚುಕ್ಕೆ ರೋಗದಿಂದ ಒಟ್ಟು 53,977 ಹೆಕ್ಟೇರ್ ಪ್ರದೇಶವು ಹಾನಿಗೀಡಾಗಿದೆ ಮತ್ತು ಅಂದಾಜು 1,10,181.13 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ, ಅಡಿಕೆ ಹಳದಿ ಎಲೆ ರೋಗದಿಂದ ಒಟ್ಟು 13,767 ಹೆಕ್ಟೇರ್ ಪ್ರದೇಶ ಹಾನೀಡಾಗಿದೆ, ಅಂದಾಜು 56,233.25 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ ಎಂದು ಹೇಳಿದರು.
ಅಡಿಕೆಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

“ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದ ಅನುಭವಿಸುತ್ತಿರುವ ರೈತರ ಸಂಕಷ್ಟವನ್ನು ಕೇಂದ್ರದ ಗಮನಕ್ಕೆ ತಂದು ನೆರವು ಪಡೆಯಲು ಪ್ರಯತ್ನಿಸಲಾಗುವುದು ಈಗಾಗಲೇ ರೋಗ ತಡೆ ಕ್ರಮಗಳಿಗೆ 21 ಕೋಟಿ ಬಿಡುಗಡೆ ಮಾಡಲಾಗಿದೆ” ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಆಸ್ತಿ ಗಳಿಕೆ ಆರೋಪ; ಡಿಸಿಎಂ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿ

“ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ” ಎಂದು ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಸರವಣ ಪ್ರಶ್ನೆಗೆ ಉತ್ತರಿಸಿ, “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಅನ್ವಯ ಪ್ರತಿ ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟಕ್ಕೆ ಮಳೆಯಾಶ್ರಿತ ಬೆಳೆಗಳಿಗೆ 8,500 ನೀರಾವರಿ ಬೆಳೆಗಳಿಗೆ 17,000 ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,500 ಪರಿಹಾರ ನಿಗದಿ ಮಾಡಲಾಗಿದೆ” ಎಂದರು.

“ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ರೂ. 2,000 ರಂತೆ ಇಲ್ಲಿಯವರೆಗೆ 30,24,795 ರೈತರಿಗೆ ರೂ 573.28 ಕೋಟಿ‌ ಪರಿಹಾರದ ಮೊತ್ತವನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶದ ಮುಖಾಂತರ ವಿತರಿಸಲಾಗಿರುತ್ತದೆ” ಎಂದು ಹೇಳಿದರು.

“ಕೇಂದ್ರದಿಂದ ಪರಿಹಾರ ನೀಡುವಂತೆ ಮನವಿ ಮಾಡಲಾಗಿದ್ದು, ಪರಿಹಾರದ ಹಣ ಬಂದ ಕೂಡಲೇ ರೈತರಿಗೆ ಹಣ ಬಿಡುಗಡೆ ಮಾಡಲಾಗುವುದು ಅದು ಒಂದು ವಾರದೊಳಗೆ ರೈತರ ಖಾತೆಗೆ ಹಣ ಸೇರುವಂತೆ ‌ವ್ಯವಸ್ಥೆಯ‌ನ್ನು ಮಾಡಲಾಗಿದೆ” ಎಂದರು.

ರಾಜ್ಯದ ಒಂದು ಕೋಟಿಗೂ‌ ಹೆಚ್ಚು ರೈತರು ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ರಾಜ್ಯ ಸರ್ಕಾರ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸದೇ ಕೂಡಲೇ ರೈತರ ನೆರವಿಗೆ ಧಾವಿಸಿ ಪರಿಹಾರ ನೀಡುವಂತೆ ಸರವಣ ಆಗ್ರಹಿಸಿದರು.

ಪ್ರಶ್ನೆ ಕೇಳುವ ವೇಳೆ ಆಡಳಿತ ಪಕ್ಷದ ಸಚಿವರು ಸದಸ್ಯರು ನಗುತ್ತಿದ್ದಾಗ ಆಕ್ರೋಶಗೊಂಡ ಸರವಣ, ”ನಗುತ್ತಾ ರಾಜಕೀಯ ಮಾಡಬೇಡಿ‌ ನಮ್ಮ ಅಹವಾಲು ಕೇಳಿ ಇದೇ ಪ್ರಶ್ನೆಯನ್ನು ನಾಲ್ಕೈದು ಬಾರಿ‌ ಕೇಳಿದ್ದೇನೆ” ಎಂದಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವರಿಂದ ಸೂಕ್ತ ಉತ್ತರ ಕೊಡಿಸುವ ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜ್ಯ ನಾಯಕರೇ ಪ್ರತಿಪಕ್ಷದಲ್ಲಿದ್ದಾಗ ಜನಪರವಾಗಿ ಅಬ್ಬರಿಸಿ ಬೊಬ್ಬಿರಿಯುವ ನೀವು ಅದೇ ಅಧಿಕಾರಕ್ಕೇರಿದಾಗ ಸಂಕಷ್ಟಕ್ಕೆ ಸಿಲುಕಿ ನಲುಗುವ ರೈತರಿಗೆ ನೆರವಾಗಲು ಸಾಧ್ಯವಿಲ್ಲ ಅಂತೇಳಿ ಕೈಚೆಲ್ಲಿ ಕೂರ್ತಿರಲ್ಲ.. ಇದು ನ್ಯಾಯವಾ ಸ್ವಾಮಿ.. ಮಾನ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವ್ರೇ…

    ಎಂ. ಶಿವರಾಂ. ಬೆಂಗಳೂರು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ಕೋರ್ಟ್‌ ಸ್ಥಾಪನೆಯಲ್ಲಿ ವಿಳಂಬ; ಹೈಕೋರ್ಟ್‌ ಅಸಮಾಧಾನ

ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ...

ವಾಲ್ಮೀಕಿ ನಿಗಮ ಅಕ್ರಮ | ಇ.ಡಿ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ರಾಜ್ಯ ಸರ್ಕಾರ, ಗಾಂಧಿ ಪ್ರತಿಮೆ ಬಳಿ ಧರಣಿ

ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ...