ಬಜೆಟ್‌ ಅಧಿವೇಶನ | ರಾಜ್ಯ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಕೇಂದ್ರದಿಂದ ಬಿಡುಗಡೆಯಾಗದ ಪರಿಹಾರ : ರಾಜ್ಯಪಾಲ ಗೆಹ್ಲೋಟ್ ಬೇಸರ

Date:

Advertisements

“ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರದಿಂದ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಅನ್ಯಾಯ ಹಾಗೇ ಇದೆ” ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿರು.

“ಬರ ಪೀಡಿತ ತಾಲೂಕುಗಳಲ್ಲಿ ಬರ ಪರಿಹಾರ ಕ್ರಮಗಳಿಗಾಗಿ ಎನ್‌ಡಿಆರ್‌ಎಫ್‌ನಿಂದ 18,171.44 ಕೋಟಿ ರೂ. ಆರ್ಥಿಕ ನೆರವು ಕೋರಿ ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಕ್ಕೆ ರಾಜ್ಯ ಸರ್ಕಾರವು ಖಾರಿಫ್ ಬರ ಪರಿಹಾರಕ್ಕೆ ಸಂಬಂಧಿಸಿದ ಜ್ಞಾಪನ ಪತ್ರಗಳನ್ನು ಸಲ್ಲಿಸಿದೆ. ಆದರೆ, ಇದುವರೆಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ. ಬರ ಪರಿಹಾರವನ್ನು ತುರ್ತಾಗಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಹೇಳಿದರು.

Advertisements

“ಕೇಂದ್ರದಿಂದ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಈಗಲೂ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ರಾಜ್ಯಪಾಲರು ಹೇಳಿದರು.

ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನ ಒದಗಿಸಿವೆ” ಎಂದು ಬಣ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ” ಎಂದು ಹೇಳಿದರು.

“ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ ರೂ. 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬರಪೀಡಿತ ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ

“ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಾಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದು ಗೆಹ್ಲೋಟ್ ತಿಳಿಸಿದರು.

“ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024ರ ಫೆಬ್ರವರಿ 5ರವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5,787 ಪ್ರಕರಣಗಳು ಬಾಕಿ ಉಳಿದಿವೆ” ಎಂದರು.

ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಕ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು.

ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X