ವಿಧಾನಸಭಾ ಅಧಿವೇಶನದಲ್ಲಿ ಬುಧವಾರ(ಫೆ. 21) ಮಹತ್ವದ 13 ವಿಧೇಯಕಗಳನ್ನು ಸಚಿವರು ಮಂಡಿಸಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಅವರಿಂದ ಅಂಗೀಕಾರಗೊಂಡಿವೆ.
2024ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಲು ಕಾನೂನು ಸಚಿವ ಹೆಚ್ ಕೆ ಪಾಟೀಲ್‌ರವರು, 2024ನೇ ಸಾಲಿನ ಕರ್ನಾಟಕ ಪೊಲೀಸು (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್, 2024ನೇ ಸಾಲಿನ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ ವಿಧೇಯಕ) , 2024ನೇ ಸಾಲಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ 2024ನೇ ಸಾಲಿನ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳನ್ನು ಮಂಡಿಸಿದರು.
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, 2024ನೇ ಸಾಲಿನ ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರುಗಳ ವಿಧೇಯಕ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತ ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯನ) (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.
2024ನೇ ಅಂತರ್ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು 2024ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿದರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, 2024ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಹಾಗೂ 2024ನೇ ಸಾಲಿನ ಗದಗ-ಬೆಟಗೇರಿ ವ್ಯಾಪಾರ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಲು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ಪ್ರಸ್ತಾವನೆಗಳನ್ನು ಮಂಡಿಸಿದರು.
ಪ್ರಸ್ತಾವವಗಳನ್ನು ಪರ್ಯಾಲೋಚಿಸಿದ ನಂತರ 13 ವಿಧೇಯಕಗಳನ್ನು ಸಭಾಧ್ಯಕ್ಷರಿಂದ ಅಂಗೀಕರಿಸಲಾಯಿತು.
