ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾದ ಬಜೆಟ್ : ಶಿಕ್ಷಣ ತಜ್ಞ ನಿರಂಜನಾರಾಧ್ಯ

Date:

Advertisements
  • ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ ಘೋಷಿಸಿದ ಸಿಎಂ
  • ಶಿಕ್ಷಣ ಕ್ಷೇತ್ರಕ್ಕೆ ಶೇ 11ರಷ್ಟು ಬಜೆಟ್ ಮೀಸಲಿಟ್ಟ ಕ್ರಮಕ್ಕೆ ಅಭಿನಂದನೆ

2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ, ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ. ತಿಳಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಹಣಕಾಸು ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗೂ ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ , ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಸೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುವುದಾಗಿ ನಿರಂಜನಾರಾಧ್ಯ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ಶಿಕ್ಷಣ ಇಲಾಖೆಗೆ ಸಿಕ್ಕಿದ್ದೆಷ್ಟು?

ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ, ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ, ಅತ್ಯಂತ ಶಿಥಿಲವಾದ ಹಾಗೂ ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 1೦೦ ಕೋಟಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನವನ್ನು 20,000ದಿಂದ 45000ಕ್ಕೆ ಏರಿಸಲು 153 ಕೋಟಿ, ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ, ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ, ಮಕ್ಕಳ ಸೃಜನಾತ್ಮಕ ಚಿಂತನೆ ಹಾಗೂ ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ, ಸಾಟ್ಸ್‌ (Students Achievement Tracking System)ನ್ನು 2.0ಗೆ ಮೇಲ್ದರ್ಜೆಗೇರಿಸಲು ಕ್ರಮ, ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು ಮುಖ್ಯ ಮಂತ್ರಿಗಳು ಹಾಗೂ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37,587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ ಎಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಹರಿಕಾರರೂ ಆದ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ. ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X