ಮೂತ್ರ ವಿಸರ್ಜಿಸಿದ ಬಿಜೆಪಿ ಆರೋಪಿಯ ಮನೆ ಧ್ವಂಸಗೊಳಿಸಿದ ಮಧ್ಯಪ್ರದೇಶ ಸರ್ಕಾರ

Date:

ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಪ್ರವೇಶ್ ಶುಕ್ಲಾ ಅವರ ನಿವಾಸದ ಒಂದು ಭಾಗವನ್ನು ಮಧ್ಯ ಪ್ರದೇಶ ಸರ್ಕಾರದ ಆದೇಶದ ಮೇರೆಗೆ ಧ್ವಂಸಗೊಳಿಸಲಾಗಿದೆ.

- Advertisement -

ಮಂಗಳವಾರ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧನದ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸಾಕೇತ್ ಮಾಳವಿಯಾ ಅವರು ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ) ಅನ್ನು ಜಾರಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎನ್‌ಎಸ್‌ಎ ಜಾರಿಗೊಳಿಸುವುದಾಗಿ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ನಿನ್ನೆ ಟ್ವೀಟ್‌ (ಜುಲೈ 5) ಮೂಲಕ ತಿಳಿಸಿದ್ದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತಮ್ಮ ಆದೇಶದಲ್ಲಿ “ಆರೋಪಿ ಪ್ರವೇಶ್ ಶುಕ್ಲಾನನ್ನು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದ್ದು, ಆತನನ್ನು ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ಅಲ್ಲದೆ ಎನ್‌ಎಸ್‌ಎ ಆದೇಶದ ನಂತರ ಬುಲ್ಡೋಜರ್‌ಗಳು ಶುಕ್ಲಾ ಅವರ ಮನೆಗೆ ಆಗಮಿಸಿದವು. ಅವರ ಕುಟುಂಬದ ಸದಸ್ಯರು ಆಸ್ತಿಯು ಕುಟುಂಬದ ಇತರ ಸದಸ್ಯರಿಗೆ ಸೇರಿದ್ದು ಎಂದು ಪ್ರತಿಭಟಿಸಿದರು. ಆದರೆ 400 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಅತಿಕ್ರಮಣಗಳನ್ನು ಮಾತ್ರ ಕೆಡವಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನಿಂದ ಮೂತ್ರ ವಿಸರ್ಜನೆ 

ಬುಲ್ಡೋಜರ್‌ ಕ್ರಮದ ಬಗ್ಗೆ ಟ್ವೀಟ್‌ ಮಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿಗಳ ಕಚೇರಿ, ಎನ್ಎಸ್ಎಯನ್ನು ಆಹ್ವಾನಿಸಿ ಬುಲ್ಡೋಜರ್ ಅನ್ನು ಓಡಿಸಲಾಗಿದೆ. ಅಗತ್ಯವಿದ್ದರೆ, ಅಧಿಕಾರಿಗಳು ಅಪರಾಧಿಗಳಿಗೆ ತಕ್ಕ ದಂಡನೆಯನ್ನು ನೀಡಲು ಸಿದ್ದರಿದ್ದಾರೆ. ಮಧ್ಯಪ್ರದೇಶ ಸರ್ಕಾರದ ಸಂದೇಶ ಸ್ಪಷ್ಟವಾಗಿದೆ. ರಾಜ್ಯದಲ್ಲಿ ತಪ್ಪು ಮಾಡಲು ಉದ್ದೇಶಿಸುವವರು 10 ಸಾರಿ ಯೋಚಿಸಬೇಕು” ಎಂದು ಎಚ್ಚರಿಕೆ ನೀಡಿದೆ.

ಸಿಎಂ ಸೂಚನೆಯ ಮೇರೆಗೆ, ಆರೋಪಿಯ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 294, 504, ಸೆಕ್ಷನ್ 3(1) ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಇದು ದೇಶದಲ್ಲಡೆ ಆಕ್ರೋಶಕ್ಕೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...