ಮನರಂಜನೆಗಾಗಿ ಚಾಲಕನಿಂದ ಕೊಡೆ ಹಿಡಿದು ಬಸ್‌ ಚಾಲನೆ : ಸಾರಿಗೆ ಇಲಾಖೆ ಸ್ಪಷ್ಟನೆ

Date:

Advertisements

ಮಳೆ ಬರುತ್ತಿರುವಾಗ ಚಾಲಕನೋರ್ವ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾಗಿ ಸ್ಪಷ್ಟೀಕರಣ ನೀಡಿರುವ ಸಾರಿಗೆ ಇಲಾಖೆ, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ್ದಾರೆ. ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಲ್ಲಾಗಲೀ ಯಾವುದೇ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿಸಿದೆ.

ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು,”ಮಳೆ ಬರುತ್ತಿರುವಾಗ ಚಾಲಕರ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮನರಂಜನೆಗಾಗಿ ಈ ರೀತಿ ಮಾಡಿದ್ದಾರೆ. ಬಸ್ಸಿನಲ್ಲಿ ಛತ್ರಿ ಹಿಡಿದು ರೀಲ್ಸ್ ಮಾಡಿದ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ” ಎಂದು ತಿಳಿಸಿದೆ.

ಸ್ಪಷ್ಟನೆಯಲ್ಲಿ ಏನಿದೆ?

Advertisements

ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಎ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದಾಗ ಸಂಜೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ್ದಾರೆ. ಚಾಲನೆ ಮಾಡುತ್ತಿರುವ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

ಮಳೆ ಬರುತ್ತಿದ್ದಾಗ ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಿಂದ ಸೋರುತ್ತಿರಲಿಲ್ಲ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿದ್ದು, ಮೇಲ್ಚಾವಣಿ ಸೋರುತ್ತಿಲ್ಲ ಎನ್ನುವುದನ್ನು ಖಚಿತಪಡಿಸಲಾಗಿದೆ.

ಈ ವಿಡಿಯೋದ ಬಗ್ಗೆ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ರಾಜಕೀಯಕ್ಕೆ ಬಳಸಿಕೊಂಡಿದ್ದ ಬಿಜೆಪಿ

ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್, ಅಶ್ವತ್ ನಾರಾಯಣ ಟ್ವೀಟ್ ಮಾಡಿ, ಸರ್ಕಾರದ ವಿರುದ್ಧ ಮುಗಿಬಿದ್ದಿದ್ದರು.

“ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ ಎಂಬ ಹೆಗ್ಗಳಿಕೆ ಹೊಂದಿರುವ ನಮ್ಮ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಾಂಗ್ರೆಸ್‌ ಸರ್ಕಾರ ಎಂತಹ ಪರಿಸ್ಥಿತಿ ತಂದಿಟ್ಟಿದೆ ನೋಡಿ. ಬಸ್‌ ಚಾಲಕರು ಛತ್ರಿ ಹಿಡಿದು ವಾಹನ ಚಲಾಯಿಸುವ ದೃಶ್ಯ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರೇ, ಇಂತಹ ಬಸ್‌ಗಳನ್ನು ರಸ್ತೆಗೆ ಬಿಡುವಷ್ಟು ದುಃಸ್ಥಿತಿ ತಲುಪಿದೆಯೇ ನಮ್ಮ ಸಾರಿಗೆ ಇಲಾಖೆ?” ಎಂದು ಪ್ರಶ್ನಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X