ಬಸ್ ದರ ಏರಿಕೆ | ಬಿಜೆಪಿ ಸರ್ಕಾರದ ಅವಧಿಯ ‘ದರ ಏರಿಕೆ’ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Date:

ಸರ್ಕಾರಿ ಬಸ್‌ ಪ್ರಯಾಣ ದರವನ್ನು 15% ಏರಿಕೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರವೇ ಸಾರಿಗೆ ಇಲಾಖೆ ಮೇಲೆ ಹೊರಿಸಿರುವ ಸಾಲದಿಂದ ಹೊರಬರಲು ಬೆಲೆ ಏರಿಕೆ ಅಗತ್ಯವಾಗಿದೆ ಎಂದು ಕಾಂಗ್ರೆಸ್‌ ವಾದಿಸುತ್ತಿದೆ. ಈ ನಡುವೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಏರಿಕೆಯಾಗಿದ್ದ ಬಸ್‌ ಪ್ರಯಾಣ ದರಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದೆ.

- Advertisement -

ವಿಪಕ್ಷ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಬಿಜೆಪಿಗರು ಬೆಂಗಳೂರಿನ ಮೆಜೆಸ್ಟಿಕ್ ಬಸ್‌ ನಿಲ್ದಾಣದಲ್ಲಿ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಇದೇ ಆರ್‌ ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಐದು ವರ್ಷಗಳಲ್ಲಿ 7 ಬಾರಿ ದರ ಏರಿಕೆ ಮಾಡಿ, 47.8% ಹೆಚ್ಚಿಸಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ. ಅದರ ಪಟ್ಟಿ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
image 37

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ಸರ್ಕಾರದಲ್ಲಿ ಏರಿಕೆಯಾಗಿದ್ದ ದರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಆ ಪಟ್ಟಿ ಹೀಗಿದೆ;

ದಿನಾಂಕ ಮತ್ತು ಶೇಕಡಾವಾರು
29/8/2008 – 12.01%
7/7/2009 – 3.56%
3/3/2010 – 4.76%
23/6/2010 – 3.50%
26/6/2011 – 6.95%
19/12/2011 – 5.01%
30/09/2012 – 12%

ಅಲ್ಲದೆ, 2020 ಫೆಬ್ರವರಿ 26ರಂದು ಬಿಜೆಪಿ ಸರ್ಕಾರ 12% ಪ್ರಯಾಣ ದರ ಏರಿಕೆ ಮಾಡಿತ್ತು.

ಈ ವರದಿ ಓದಿದ್ದೀರಾ?: ಬಸ್‌ ಟಿಕೆಟ್‌ ದರ ಏರಿಕೆ | ಸಾರ್ವಜನಿಕರ ಆಕ್ರೋಶ – ಸರ್ಕಾರದ ಸಮರ್ಥನೆ

ಸದ್ಯ, ಶಕ್ತಿ ಯೋಜನೆ ಜಾರಿಯಲ್ಲಿದ್ದು, ಮಹಿಳೆಯರಿಗೆ ದರ ಏರಿಕೆ ಪರಿಣಾಮ ಬೀರುವುದಿಲ್ಲ. ಆದರೆ, ಪುರುಷರ ಮೇಲೆ ಪರಿಣಾಮ ಬೀರಲಿದೆ. ಆ ಕಾರಣಕ್ಕಾಗಿಯೇ, ಶಕ್ತಿಯೋಜನೆ ಹಣ ಸರಿದೂಗಿಸಲು ಸರ್ಕಾರ ಇಂತಹ ಕ್ರಮ ಕೈಗೊಳ್ಳುತ್ತಿದೆ ಎಂದು ಬಿಜೆಪಿ ಮೊದಲಿನಿಂದಲೂ ಆರೋಪಿಸುತ್ತಿದೆ. ಈ ಆರೋಪವನ್ನು ಕಾಂಗ್ರೆಸ್‌ ಅಲ್ಲಗಳೆಯುತ್ತಲೇ ಬಂದಿದೆ. ಶಕ್ತಿ ಯೋಜನೆಯನ್ನು ನಾವು ಭರವಸೆ ಕೊಟ್ಟಂತೆ ಜಾರಿಗೆ ಮಾಡಿದ್ದೇವೆ. ಇಂತಹ ಜನಪ್ರಿಯ ಯೋಜನೆಯ ವಿರುದ್ಧ ಬಿಜೆಪಿ ಅನಗತ್ಯ ಆರೋಪ ಮಾಡುತ್ತಿದೆ. ಶಕ್ತಿ ಯೋಜನೆಯಂತಹ ಯೋಜನೆಗಳು ಜಾರಿಯಲ್ಲಿಲ್ಲದ ರಾಜ್ಯಗಳೂ ಬೆಲೆ ಏರಿಕೆ ಮಾಡುತ್ತವೆ. ಶಕ್ತಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಹಿಂದಿನ ಬಿಜೆಪಿ ಸರ್ಕಾರವೇ ಮಾಡಿರುವ ಸಾಲದ ಹೊರೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...