2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗ ಸಾರ್ವಜನಿಕರ ಸೇವೆಗೆ ಲಭ್ಯ: ಡಿ ಕೆ ಶಿವಕುಮಾರ್

Date:

Advertisements

2025ರ ವೇಳೆಗೆ ಸುಮಾರು 30 ಕಿ.ಮೀ ಹಾಗೂ 2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗಗಳನ್ನು ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದು ಡಿಸಿಎಂ ಡಿ‌ ಕೆ ಶಿವಕುಮಾರ್ ಹೇಳಿದರು.

ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ ( ಬೆಂಗಳೂರು ಅಂತರರಾಷ್ಟ್ರೀಯ ಮತ್ತು ಪ್ರದರ್ಶನ ಕೇಂದ್ರ)ದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಬುಧವಾರ ಪರಿಶೀಲನೆ ಮಾಡಿ ಮಾತನಾಡಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕ ಶ್ರೀನಿವಾಸಯ್ಯ, ದಾಸರಹಳ್ಳಿ ಶಾಸಕ ಮುನಿರಾಜು ಅವರ ಜೊತೆ ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಮೆಟ್ರೋ ಮೂರನೇ ಹಂತಕ್ಕೆ ಒಪ್ಪಿಗೆ

Advertisements

“ಈಗಾಗಲೇ ₹ 1,130 ಕೋಟಿ ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ” ಎಂದರು.

“ನಾಗಸಂದ್ರದಿಂದ ಮೂರು ಕಿಮೀ ದೂರವಿರುವ ಮಾದಾವರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ವರೆಗೆ ವಿಸ್ತರಿತ ನೂತನ ಮಾರ್ಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಉದ್ಘಾಟನೆ ಮಾಡಲಾಗಿದೆ‌. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಯೋಜನೆಗೆ ಒಪ್ಪಿಗೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಹಾಗೂ ಇತರೇ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಸ್ತರಿತ ಮೆಟ್ರೋ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುವುದು” ಎಂದು ತಿಳಿಸಿದರು.

“ಉಪಚುನಾವಣೆ ಇರುವ ಕಾರಣಕ್ಕೆ ಸಿದ್ದರಾಮಯ್ಯ ಅವರು ಒಂದು ವಾರಗಳ ಕಾಲಾವಕಾಶ ಕೇಳಬಹುದಿತ್ತು. ಆದರೆ, ಅಧಿಕಾರದಲ್ಲಿದ್ದುಕೊಂಡು ಅವಕಾಶವನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ” ಎಂದು ಹೇಳಿದರು.

ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ದೂರು ರಾಜಕೀಯ ಬಣ್ಣ

ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ರಾಜ್ಯದ ಬಾರ್ ಮಾಲೀಕರು ದೂರು ನೀಡಿರುವ ಬಗ್ಗೆ ಕೇಳಿದಾಗ “ಆಡಳಿತಾತ್ಮಕ ವಿಚಾರದಲ್ಲಿ ಯಾರು ಬೇಕಾದರೂ ರಾಜ್ಯಪಾಲರಿಗೆ ದೂರನ್ನು ನೀಡಬಹುದು. ಈ ಹಿಂದೆಯೂ ನೂರಾರು ದೂರುಗಳು ಬಂದಿದ್ದವು. ಈಗ ಇದೆಲ್ಲಾ ವಿಶೇಷವಾಗಿ ನಡೆಯುತ್ತಿದ್ದು, ಇದೊಂದು ರಾಜಕೀಯ ಬಣ್ಣ” ಎಂದು ಹೇಳಿದರು.

ಕಾನೂನಿನ ಪ್ರಕಾರ ಕ್ರಮ

ಬೆಳಗಾವಿಯ ಎಸ್ ಡಿಎ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂದಿರುವ ಬಗ್ಗೆ ಕೇಳಿದಾಗ “ಯಾರೇ ತಪ್ಪು ಮಾಡಿದ್ದರು ಪೊಲೀಸ್ ಇಲಾಖೆ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X