ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

Date:

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ ‘ಇಂಡಿಯಾ’ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಜೆಪಿ ನೇತೃತ್ವದ ಎನ್‌ಡಿಎ ಕೇವಲ 2 ಸ್ಥಾನಗಳಲ್ಲಿ ಮಾತ್ರವೇ ಗೆದ್ದಿದೆ. ಕಳೆದ ತಿಂಗಳಷ್ಟೇ 3ನೇ ಅವಧಿಗೆ ಅಧಿಕಾರಕ್ಕೇರಿದ ಬಿಜೆಪಿ, ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.

- Advertisement -

ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಮೊಹಿಂದರ್ ಭಗತ್ ಅವರು 23,000 ಮತಗಳ ಅಂತರದಿಂದ ನಿರ್ಣಾಯಕ ವಿಜಯ ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದ ಎಲ್ಲ ನಾಲ್ಕು ಸ್ಥಾನಗಳನ್ನು ಟಿಎಂಸಿ ಗೆಲ್ಲುವ ಮೂಲಕ ಮತ್ತೆ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಡೆಹ್ರಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ತಮ್ಮ ಮೊದಲ ಸ್ಪರ್ಧೆಯಲ್ಲೇ ವಿಧಾನಸಭೆ ಪ್ರವೇಶಿಸಿದ್ದಾರೆ. ನಲಗಢ್‌ ಕ್ಷೇತ್ರವನ್ನೂ ಕಾಂಗ್ರೆಸ್‌ ಗೆದ್ದುಕೊಂಡಿದೆ. ಹಮೀರ್‌ಪುರದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆಯ ಅಣ್ಣಿಯೂರ್ ಶಿವ ಅವರು ಸುಮಾರು 60,000 ಮತಗಳ ಅಂತರದಲ್ಲಿ ಗಮನಾರ್ಹ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗಳೌರ್ – ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದ್ದರೆ, ಮಧ್ಯಪ್ರದೇಶದ ಅಮರವಾರ್ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾಹಿ ಗೆಲುವು ಸಾಧಿಸಿದ್ದಾರೆ. ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಜೆಡಿಯು ಅಭ್ಯರ್ಥಿ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು ಸ್ವತಂತ್ರ ಅಭ್ಯರ್ಥಿ ಶಂಕರ್ ಸಿಂಗ್ ಅವರು 8 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರಕ್ಕೆ ಮುಖಭಂಗವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...