ಉಪಚುನಾವಣೆ | ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು

Date:

Advertisements

ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ ಮುನ್ನ ಜನ ಉತ್ಸಾಹದ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ.

ಚನ್ನಪಟ್ಟಣ ಕ್ಷೇತ್ರ

Advertisements

ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್​ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ ಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ. 8 ವಿಶೇಷ ಮತಗಟ್ಟೆ, 5 ಸಖಿ ಮತಗಟ್ಟೆ, ವಿಶೇಷ ಚೇತನರಿಗಾಗಿ 1 ಮತಗಟ್ಟೆ, 1 ಯುವ ಮತಗಟ್ಟೆ, 1 ಸಾಂಪ್ರದಾಯಿಕ ಮತಗಟ್ಟೆ ತೆರೆಯಲಾಗಿದೆ. 54 ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್ಐ ದರ್ಜೆಯ ಅಧಿಕಾರಿಗಳ ನೇಮಕ ಮಾಡಲಾಗಿದೆ. 8 ಪ್ಯಾರಾಮಿಲಿಟರಿ ಪಡೆ, ಪಿಆರ್​ಒ, ಎಪಿಆರ್​ಒ ಸೇರಿದಂತೆ 1252 ಭದ್ರತಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

ಸಂಡೂರು ಕ್ಷೇತ್ರ

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 55 ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 1,215 ಸಿಬ್ಬಂದಿ, ಮೂವರು ಡಿವೈಎಸ್​​ಪಿ, 6 ಸಿಪಿಐ, 14 ಪಿಎಸ್ಐ, 22 ಎಎಸ್ಐ, 193 ಹೆಡ್​ಕಾನ್ಸ್​ಟೇಬಲ್, 14 ಕೆಎಸ್​ಆರ್​ಪಿ ತುಕಡಿ ಸೇರಿ 1500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಶಿಗ್ಗಾಂವಿ ಕ್ಷೇತ್ರ

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಮತ್ತು ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿದ್ದಾರೆ. ಇವರ ಜೊತೆ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.

ಶಿಗ್ಗಾಂವಿಯಲ್ಲಿ ಒಟ್ಟು 2,37,525 ಮತದಾರರಿದ್ದಾರೆ. ಈ ಪೈಕಿ ಪುರುಷರು 1,21,443 ಹಾಗೂ ಮಹಿಳೆಯರು 1,16,76 ಮತಗಳಿವೆ. ಒಟ್ಟು 241 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಪೈಕಿ 92 ಮತಗಟ್ಟೆಗಳು ಸೂಕ್ಷ್ಮವೆಂದು ಗುರ್ತಿಸಲಾಗಿದೆ. ಓರ್ವ ಎಎಸ್​ಪಿ, ನಾಲ್ವರು ಡಿವೈಎಸ್​ಪಿ, 12 ಸಿಪಿಐ, 24 ಪಿಎಸ್ಐ, 68 ಎಎಸ್ಐ ಸೇರಿ 716 ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X