ಕರಾವಳಿ ಕೋಮು ಗಲಭೆಗೆ ಸರ್ಕಾರ ಪ್ರಚೋದನೆ ಕಾರಣ: ಬಿ ವೈ ವಿಜಯೇಂದ್ರ

Date:

Advertisements

ಕರಾವಳಿ ಭಾಗದಲ್ಲಿ ಶಾಂತಿ, ಸುವ್ಯವಸ್ಥೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು. ಆ ಮುಖಂಡರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರ ಮೂಲಕ ಸರ್ಕಾರವೇ ಗಲಭೆಗೆ ಪ್ರಚೋದನೆ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹಾಗೂ ಒಬ್ಬ ಮುಸಲ್ಮಾನನ ಹತ್ಯೆಯೂ ಆಗಿದೆ. ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕ ರೀತಿಯಲ್ಲಿ ನಿಭಾಯಿಸಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂಬ ನೆಪ ಒಡ್ಡಿ ಪೊಲೀಸರ ಮೇಲೆ ಒತ್ತಡ ಹೇರಿ ಮಧ್ಯರಾತ್ರಿ ವೇಳೆ ಅಮಾಯಕ ಹಿಂದೂ ಕಾರ್ಯಕರ್ತರ ಮನೆ ಬಾಗಿಲು ತಟ್ಟಿ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ಯಾರನ್ನೋ ಓಲೈಸುವ ಹಾಗೂ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿರುವಂತಿದೆ ಎಂದು ದೂರಿದರು.

ತಪ್ಪು ಮಾಡಿದವರನ್ನು ಬಂಧಿಸಲಿ, ಆದರೆ ವಿನಾಕಾರಣ ಹಿಂದೂಗಳನ್ನು ಗುರಿಯಾಗಿಸಿಕೊಳ್ಳುವುದು ಸರಿಯಲ್ಲ. ಇಂಥ ನಡುವಳಿಕೆಯಿಂದ ಅಲ್ಲಿಯ ಪರಿಸ್ಥಿತಿ ತಿಳಿಯಾಗಲು ಸಾಧ್ಯವೇ ಇಲ್ಲ. ಬದಲಾಗಿ ವಾತಾವರಣ ಮತ್ತಷ್ಟೂ ಹದಗೆಡಲಿದ್ದು ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ ಪರಮೇಶ್ವರ ಅರ್ಥಮಾಡಿಕೊಳ್ಳಲಿ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಥಳೀಯ ಸರ್ಕಾರಗಳ ಚುನಾವಣೆ ವಿಳಂಬ; ಕಾಂಗ್ರೆಸ್ ನಡೆ ಸಂವಿಧಾನ ವಿರೋಧಿಯಲ್ಲವೇ?

ಕಾಂಗ್ರೆಸ್ ಮುಂದೆ ಬಿಜೆಪಿ ದುರ್ಬಲವಾಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ವಿಜಯೇಂದ್ರ, ‘ಅಭಿವೃದ್ಧಿಯಲ್ಲಿ ಶೂನ್ಯವಾಗಿರುವ ರಾಜ್ಯ ಸರ್ಕಾರ ರೈತ ವಿರೋಧಿಯಾಗಿದೆ. ನಾಚಿಕೆ, ಮಾನ ಮರ್ಯಾದೆ ಮೂರನ್ನೂ ಬಿಟ್ಟು ಭಾರತನದಿಂದ ನಡೆದುಕೊಳ್ಳುತ್ತಿದೆ. ಇದನ್ನು ರಾಜ್ಯದಾದ್ಯಂತ ನಡೆಸಿದ ಜನಾಕ್ರೋಶ ಯಾತ್ರೆಯ ಮೂಲಕ ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುವ ಕೆಲಸ ಪ್ರತಿಪಕ್ಷವಾಗಿ ಬಿಜೆಪಿ ಮಾಡಿದೆ ಎಂದರು.

ಶಾಸಕ ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ಮಾಜಿ ಶಾಸಕರಾದ ಕೆ.ಶರಣಪ್ಪ, ದೊಡ್ಡನಗೌಡ ಹುನಗುಂದ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು, ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಕೆ.ಬಸವರಾಜ ಕ್ಯಾಪ್ಟಟರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಮುಖಂಡರಾದ ತಿಪ್ಪೇಸ್ವಾಮಿ, ವಿರೂಪಾಕ್ಷಪ್ಪ ಸಿಂಗನಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X