ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೆಲುವಿನ ಹಾದಿಯಲ್ಲಿದ್ದಾರೆ. ಬರೋಬ್ಬರಿ 1.57 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಪ್ರಿಯಾಂಕಾ ಗಾಂಧಿ 2,39,554 ಮತಗಳನ್ನು ಪಡೆದಿದ್ದರೆ, ಅವರ ಪ್ರತಿಸ್ಪರ್ಧಿ ಸಿಪಿಐನ ಸತ್ಯನ್ ಮೊಕೆರಿ ಅವರು 82,082 ಮತಗಳನ್ನು ಪಡೆದಿದ್ದಾರೆ. ಪ್ರಿಯಾಂಕಾ ಮತ್ತು ಸತ್ಯನ್ ಅವರ ನಡುವಿನ ಅಂತರ ಬರೋಬ್ಬರಿ1,57,472 ಮತಗಳಷ್ಟಿದೆ.
ಇನ್ನು, ಕೆಲವೇ ಕೆಲವು ಸುತ್ತಿನ ಮತ ಎಣಿಕೆ ಮಾತ್ರವೇ ಬಾಕಿ ಉಳಿದಿದ್ದು, ಪ್ರಿಯಾಂಕಾ ಗಾಂಧಿ ಗೆಲುವು ಖಚಿತವೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.