ಕೊಲೆ ಪ್ರಕರಣ: ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Date:

ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ದನೇ ಆರೋಪಿಯಾಗಿರುವ ಮಾಜಿ ಸಚಿವ, ಕೆ ಆರ್‌ ಪುರಂನ ಬಿಜೆಪಿಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೀಗ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

- Advertisement -

ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದು ಕೊಂದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಮಗ ಹಲವು ಬಾರಿ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಶಿವಪ್ರಕಾಶ್ ತಾಯಿ ಆರೋಪಿಸಿದ್ದರು. ಕೊಲೆ ಸಂಬಂಧ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿ

ಈ ಪ್ರಕರಣ ದಾಖಲಾಗಿ ಕೆಲವು ದಿನಗಳು ಕಳೆಯುತ್ತಿದ್ದಂತೆ ಬಂಧನದ ಭೀತಿಯಲ್ಲಿ ಬೈರತಿ ಬಸವರಾಜ್ ಅವರು ತಲೆಮರೆಸಿಕೊಂಡಿದ್ದಾರೆ. ಈಗಾಗಲೇ ಬೈರತಿ ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದೀಗ ಮಧ್ಯಂತರ ಜಾಮೀನು ಅರ್ಜಿ ವಜಾಗೊಂಡಿರುವ ಕಾರಣದಿಂದಾಗಿ ಶಾಸಕರನ್ನು ಬಂಧಿಸುವ ಸಾಧ್ಯತೆಯಿದೆ.

ಈ ಫೆಬ್ರವರಿ 21ರಂದು ಬಿಕ್ಲು ಶಿವು ಭಾರತಿ ನಗರ ಠಾಣೆಯಲ್ಲಿ ದೂರು ನೀಡಿದ್ದ. ಕಿತ್ತಕನೂರು ಬಳಿ ನಾನು ಜಾಗವನ್ನು ಖರೀದಿಸಿದ್ದೆ. ಈ ಜಾಗವನ್ನು ಮಾರಾಟ ಮಾಡಬೇಕೆಂದು ಜಗದೀಶ್‌ ಮತ್ತು ಇತರರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದ. ಈ ಸಂಬಂಧ ಜಗದೀಶ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೆದರಿಕೆ ಹಾಕಿದ್ದ ವಿಡಿಯೋ ಸಹಿತ ಬೈರತಿ ಬಸವರಾಜ್, ಜಗದೀಶ್ ಅಲಿಯಾಸ್ ಜಗ್ಗ ಹಾಗೂ ಕಿರಣ್ ಸಹಚರರ ವಿರುದ್ಧ ಶಿವಪ್ರಕಾಶ್ ದೂರು ನೀಡಿದ್ದ ಎನ್ನಲಾಗಿದೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ದೂರು ನೀಡಿದ ನಾಲ್ಕು ತಿಂಗಳಲ್ಲಿ ಶಿವಪ್ರಕಾಶ್ ಕೊಲೆಯಾಗಿದ್ದು, ಅದೇ ಗ್ಯಾಂಗ್‌ನಿಂದ ಕೊಲೆಯಾಗಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...