‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

Date:

“ಲೋಕಸಭೆ ಚುನಾವಣೆ ಬಳಿಕ ‘ಇಂಡಿಯಾ’ ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದು ಮಾಡಲಾಗುವುದು” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. “ಸಿಎಎ ನೈತಿಕವಾಗಿ ಮತ್ತು ಸಾಂವಿಧಾನಿಕವಾಗಿ ಸರಿಯಲ್ಲ” ಎಂದು ವಾದಿಸಿದ್ದಾರೆ.

- Advertisement -

“ದೇಶ ವಿಭಜನೆಯಾದಾಗ ಧರ್ಮವೇ ದೇಶದ ಗುರುತಾಗಬೇಕು ಎಂದವರು ದೇಶದಿಂದ ಹೊರನಡೆದು ಪಾಕಿಸ್ತಾನ ದೇಶವನ್ನು ಸ್ಥಾಪಿಸಿದರು. ಮಹಾತ್ಮ ಗಾಂಧಿ, ಜವಾಹರ ಲಾಲ್ ನೆಹರು, ಮೌಲಾನಾ ಅಜಾದ್, ಡಾ. ಬಿ.ಆರ್‌ ಅಂಬೇಡ್ಕರ್ ಒಂದು ದೇಶಕ್ಕೆ ಧರ್ಮವೇ ಮೂಲವಲ್ಲ, ನಮ್ಮ ಸ್ವಾತಂತ್ರ್ಯ ಹೋರಾಟ ಎಲ್ಲರಿಗಾಗಿ, ನಾವು ಕಟ್ಟಿದ ದೇಶ ಮತ್ತು ನಮ್ಮ ಸಂವಿಧಾನ ಎಲ್ಲರಿಗಾಗಿ ಎಂದು ಹೇಳಿದರು” ಎಂದು ಇತಿಹಾಸವನ್ನು ಶಶಿ ತರೂರ್ ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಿಎಎ ಅನ್ನು ನಾಲ್ಕು ವರ್ಷಗಳ ಹಿಂದೆ ಅಂಗೀಕರಿಸಲಾಗಿದೆ. ಆದರೆ ಈಗ ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಅದನ್ನು ಜಾರಿ ಮಾಡಲಾಗುತ್ತಿರುವುದು ಚುನಾವಣಾ ಲಾಭಕ್ಕಾಗಿ ಎಂಬುವುದು ಸ್ಪಷ್ಟ. ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಕದ ತಟ್ಟಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ” ಎಂದು ತಿಳಿಸಿದರು.

“ಇಂಡಿಯಾ ಮೈತ್ರಿ ಒಕ್ಕೂಟ ಮತ್ತು ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ನಾವು ಅನುಮಾನವನ್ನು ಹುಟ್ಟಿಸುವ ಕಾನೂನುಗಳನ್ನು ರದ್ದು ಮಾಡುತ್ತೇವೆ. ಇದು ನಮ್ಮ ಪ್ರಣಾಳಿಕೆ ಆಗಿರಲಿದೆ. ನಮ್ಮ ನಾಗರಿಕತೆಗೆ ಧರ್ಮ ಮುಖ್ಯ ಎಂಬ ಕಾನೂನನ್ನು ನಾವು ಬೆಂಬಲಿಸಲಾರೆವು” ಎಂದು ಹೇಳಿದರು.

ಕೇಂದ್ರ ಸರ್ಕಾರವು ಮಾರ್ಚ್ 11ರಂದು ಸಿಎಎ ಜಾರಿ ಮಾಡಿದ್ದು, ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಸಿಎಎ ವಿರುದ್ಧ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...