ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ: ಸಚಿವ ಸಂಪುಟ ತೀರ್ಮಾನ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಅ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿಯು 3 ತಿಂಗಳಲ್ಲಿ ವರದಿ ನೀಡಲಿದೆ. ವರದಿ ಬರುವವರಿಗೆ ಯಾವುದೇ ಹುದ್ದೆ ನೇಮಕಾತಿ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿ ವಿಚಾರ ಸಾಕಷ್ಟು ಕಾಲದಿಂದ ಕುತೂಹಲ ಕೆರಳಿಸಿತ್ತು. ಚಿತ್ರದುರ್ಗದಲ್ಲಿ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಾವೇಶದಲ್ಲಿ ಏನು ನಿರ್ಣಯ ಕೈಗೊಳ್ಳಲಾಗಿತ್ತು, ಆ ನಿರ್ಣಯದಂತೆ ಸಚಿವ ಸಂಪುಟ ತೀರ್ಮಾನ ಮಾಡಿದೆ. ಸಂಪುಟ ಉಪ ಸಮಿತಿ ರಚಿಸಿ ಅದರ ಉಸ್ತುವಾರಿಯಲ್ಲಿ ಈ ಪ್ರಕ್ರಿಯೆ ಜಾರಿಯಾಗಬೇಕೆಂದು ಸಂಪುಟ ತೀರ್ಮಾನಿಸಿದೆ.

ಸಂಪುಟ ರಚಿಸುವ ಉಪ ಸಮಿತಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬುದು ತಿಳಿದುಬಂದಿಲ್ಲ. ಇದಲ್ಲದೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಏಕವ್ಯಕ್ತಿಯ ಆಯೋಗವನ್ನು ರಚಿಸಿ 60 ರಿಂದ 90 ದಿನಗಳೊಳಗೆ ಒಳ ಮೀಸಲಾತಿಯ ನಿಯಮ, ರೂಪುರೇಷೆ, ಪ್ರಕ್ರಿಯೆಗಳನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇಲ್ಲಿಯವರೆಗೂ ಸರ್ಕಾರದಿಂದ ಹೊರಡಿಸಲಾಗಿದ್ದ ಉದ್ಯೋಗ ಅಧಿಸೂಚನೆಯು ಯಥಾಪ್ರಕಾರ ಮುಂದುವರಿಯಲಿದೆ. ಇಂದಿನಿಂದ ಮುಂದಕ್ಕೆ ಒಳಮೀಸಲಾತಿ ಜಾರಿಯಾಗುವವರೆಗೆ ಯಾವುದೇ ಉದ್ಯೋಗ ಅಧಿಸೂಚನೆಯನ್ನು ಸರಕಾರದ ಕಡೆಯಿಂದ ಹೊರಡಿಸುವುದಿಲ್ಲ ಎಂದು ಸಂಪುಟ ತೀರ್ಮಾನಿಸಿದೆ.

Advertisements

60 ರಿಂದ 90 ದಿನಗಳಲ್ಲಿ ಗಣತಿಯನ್ನು ಕೈಗೊಳ್ಳಲಾಗುತ್ತಾ ಅಥವಾ ಈಗಿರುವ ದತ್ತಾಂಶಗಳನ್ನು ಆಧರಿಸಿ ಒಳ ಮೀಸಲಾತಿ ಜಾರಿಗೊಳಿಸಲಾಗುತ್ತದೆಯೇ ಎಂಬ ಬಗ್ಗೆ ಸರಿಯಾದ ಮಾಹಿತಿ ದೊರಕಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X