ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು

Date:

ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಮುಸ್ಲಿಂ ಅಷ್ಟೇ ಅಲ್ಲ, ಕ್ರಿಶ್ಚಿಯನ್ ಇನ್ಸ್​ಸ್ಟಿಟ್ಯೂಷನ್​​ಗೆ ಷರತ್ತುಗಳು ಅನ್ವಯವಾಗಲಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.

- Advertisement -

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿ ಅನುಮೋದಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, “ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಎಲ್ಲರಿಗೂ ಮಕ್ತ ಅವಕಾಶವಿರಲಿದೆ. ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆಯಲ್ಲಿ ಮೊದಲು ನಿರ್ಬಂಧಗಳಿದ್ದವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆಗಳನ್ನು ವಿಲೀನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಪರಿಣಾಮಕಾರಿಯಾಗಿ ಕೆಲಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಹೇಳಿದರು.

“ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವನ್ನು 43.95 ಕೋಟಿ ರೂ. ವೆಚ್ಚದಲ್ಲಿ ಒದಗಿಸಲು ತೀರ್ಮಾನಿಸಲಾಗಿದೆ. ಆಹಾರ ಗುಣಮಟ್ಟ ಮತ್ತು ಔಷಧ ನಿಯಂತ್ರಣ ಇಲಾಖೆಯನ್ನು ಒಂದು ಮಾಡಲು ಒಪ್ಪಿಗೆ ನೀಡಲಾಗಿದೆ. ಆ ಮೂಲಕ ಮತ್ತಷ್ಟು ಗುಣಮಟ್ಟ ಕಾಯ್ದುಕೊಳ್ಳಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಯುಪಿ, ಬಿಹಾರ ಬೇರೆಡೆ ಇದೇ ರೀತಿ ಮರ್ಜ್ ಮಾಡಲಾಗಿದೆ. ಇದೀಗ ಮರ್ಜ್ ಮಾಡೋದ್ರಿಂದ ಒಳ್ಳೆಯ ರಿಸಲ್ಟ್ ಸಿಗಲಿದೆ” ಎಂದು ತಿಳಿಸಿದರು.

“ವಿಶ್ವಬ್ಯಾಂಕ್ ನೆರವಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ 1500 ಕೋಟಿ ರೂ. ಕಾರ್ಯಕ್ರಮ ಯೋಜನೆ ರೂಪಿಸಲಾಗಿದೆ. ವಿಶ್ವಬ್ಯಾಂಕ್​ನಿಂದ 1,750 ಕೋಟಿ ರೂ. ಹಣ ಸಾಲ ಪಡೆಯುವುದು. ಒಟ್ಟು ಉನ್ನತ ಶಿಕ್ಷಣ ಸಂಸ್ಥೆಗಳ ಬಲವರ್ಧನೆಗೆ 2,500 ಕೋಟಿ ರೂ. ಅನುದಾನಕ್ಕೆ ಅಸ್ತು ಎನ್ನಲಾಗಿದೆ. 19.70 ಕೋಟಿ ರೂ. ವೆಚ್ಚದಲ್ಲಿ ಲ್ಯಾಬ್​​ಗಳು ಡಯಾಗ್ನಸ್ಟಿಕ್ ಕಿಟ್ ಖರೀದಿಸಲು ಅನುಮೋದನೆ ನೀಡಲಾಗಿದೆ” ಎಂದರು.

“ರಸ್ತೆ ಗುಂಡಿಗಳಿಂದ ಸರ್ಕಾರ ಟೀಕೆಗೊಳಗಾಗಿತ್ತು. ಹಾಗಾಗಿ ರಸ್ತೆ ಡಾಂಬರೀಕರಣಕ್ಕೆ ಅನುದಾನ ಬಿಡುಗಡೆ ಮಾಡಿದೆ. 694 ಕೋಟಿ ರೂ. ಅನುದಾನದಲ್ಲಿ 1681 ಕಿ.ಮೀ ಬಿಬಿಎಂಪಿ ವ್ಯಾಪ್ತಿಯ ಉಪಮುಖ್ಯ ರಸ್ತೆಗಳ‌ ಅಭಿವೃದ್ಧಿ ಮಾಡುವುದು. ಸಂಪಂಗಿರಾಮ ನಗರದಲ್ಲಿ ಸಮಾಜ‌ಕಲ್ಯಾಣ ಭವನ ನಿರ್ಮಾಣಕ್ಕೆ 40.50 ಕೋಟಿ ರೂ. ಅನುದಾನಕ್ಕೆ ಸಮ್ಮತಿಸಲಾಗಿದೆ” ಎಂದು ಹೇಳಿದರು.

“ಕಾರ್ಪೊರೇಷನ್ ಸಂಸ್ಥೆಗಳಿಗೆ ಅಂತರ್ ಉದ್ಯಮ ಠೇವಣಿ ಇಡುವುದಕ್ಕೆ ಸಂಪುಟ ಸಮ್ಮತಿ ಸೂಚಿಸಿದೆ. ಒಂದರಿಂದ ಮತ್ತೊಂದು ಉದ್ಯಮದಲ್ಲಿ ಹಣ ಠೇವಣಿ ಇಡುವುದು. ಸೇವೆ ಎಲ್ಲಿದೆ ಅಲ್ಲಿಂದ ಬೇರೆಯದಕ್ಕೆ ಠೇವಣಿ ಇಡಬಹುದಾಗಿದೆ. ಆ ಮೂಲಕ ಠೇವಣಿದಾರರ ಹಿತಾಸಕ್ತಿ ಕಾಯ್ದೆಗೆ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...