ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

Date:

Advertisements

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, “ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ” ಎಂದರು.

“ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನು ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ” ಎಂದು ಹೇಳಿದರು.

ಇತ್ತೀಚೆಗೆ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಸಲ್ಲಿಸಿದ್ದರು. ಸಚಿವ ಸಂಪುಟದಲ್ಲಿ ತೀರ್ಮಾನಿಸಿ ನಿರ್ಧಾರ ಕೈಗೊಳ್ಳಲಾಗುದು ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆ ಪ್ರಕಾರ ಇಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ನಾನು ಮತ್ತೆ ಅಧಿಕಾರಕ್ಕೆ ಬಂದು ಬದಾಲದ ಹೆಸರನ್ನು ಕಿತ್ತೊಗೆಯುತ್ತೇನೆ” ಎಂದು ಗುಡುಗಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ...

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

Download Eedina App Android / iOS

X