ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ

Date:

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

- Advertisement -

ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ ಸಂಪುಟ ಸಭೆ ನಡೆಸಿದ್ದೇವೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ತೀರ್ಮಾನಿಸಿ ಈಗಾಗಲೇ ಕಲಬುರಗಿ ಆಗಿದೆ. ಈಗ ಮೈಸೂರು ವಿಭಾಗದ್ದು ನಡೆದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಸಭೆಯನ್ನು ಮಾಡಲಿದ್ದೇವೆ. ಬೆಳಗಾವಿ ವಿಭಾಗದ್ದು ವಿಜಯಪುರ ಹಾಗೂ ಬೆಂಗಳೂರು ವಿಭಾಗದ್ದನ್ನು ನಂದಿ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮೈಸೂರು ವಿಭಾಗದ 78 ವಿಷಯಗಳ ಬಗ್ಗೆ ಚರ್ಚೆ ಆಗಿದೆ. ಕಲಬುರಗಿ ವಿಭಾಗದಲ್ಲಿ 56 ವಿಷಯಗಳ ತೀರ್ಮಾನ ಆಗಿತ್ತು. ಈಗ 3647 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ದೊರೆತಿದೆ. ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಇಂಧನ, ಆರೋಗ್ಯ, ಆರ್‌ಡಿಪಿಆರ್ ಇಲಾಖೆ, ಕೆರೆಗಳಿಗೆ ನೀರು, ಬುಡಕಟ್ಟು ಅಭಿವೃದ್ಧಿ, ಹಾಡಿಗಳಿಗೆ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

1787 ಕೋಟಿ ಯೋಜನೆಗಳು ನೀರಾವರಿ, ಪರಿಶಿಷ್ಟ ಪಂಗಡದ ಜನರು ವಾಸಿಸುವ ಕಡೆಗೆ 237 ಕೋಟಿ ರೂ. ಮಾನವ ವನ್ಯಜೀವಿ ಸಂಘರ್ಷ ನಿವಾರಣೆಗೆ ಚಾಮರಾಜನಗರ ಜಿಲ್ಲೆಗೆ 210 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ಉಗ್ರನ ರೈಫಲ್‌ ಕಸಿದುಕೊಳ್ಳಲು ಹೋಗಿ ಗುಂಡೇಟಿಗೆ ಸಾವಿಗೀಡಾದ ಕುದುರೆ ರೈಡರ್‌ ಸೈಯದ್ ಹುಸೇನ್

ಕುಡಿಯುವ ನೀರಿನ ಯೋಜನೆಗೆ 317 ಕೋಟಿ ರೂ., ಆರೋಗ್ಯ ಸುಧಾರಣೆಗೆ 210 ಕೋಟಿ ರೂ., ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಘೋಷಿಸಿದರು. ಈಗ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ 250 ಹಾಸಿಗೆಗಳ ಆಸ್ಪತ್ರೆ ಮಾಡಲಾಗುವುದು. ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ ರೂ., ಹೊಸ ತಾಲೂಕಾದ ಹನೂರಿನಲ್ಲಿ ತಾಲೂಕು ಭವನ, ತಾಲೂಕು ಆಸ್ಪತ್ರೆ (50 ಹಾಸಿಗೆ ಸಾಮರ್ಥ್ಯ) ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದರು.

ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ಸಿದ್ದಪ್ಪಾಜಿ ಪ್ರಾಧಿಕಾರ ರಚನೆ ಮಾಡಲಾಗುವುದು. ಇಲವಾಲ ಹೋಬಳಿಯಲ್ಲಿ ಕ್ರಿಕೆಟ್ ಮೈದಾನಕ್ಕೆ ಜಾಗ ಕೊಡಲಾಗುವುದು. ಅಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಭಾರತ್‌ ಜೋಡೊ ಸಂದರ್ಭದಲ್ಲಿ ಬದನವಾಳು ಗ್ರಾಮಕ್ಕೆ ಭೇಟಿ ಕೊಟ್ಟಿದ್ದವು. ಅಲ್ಲಿರುವ ಖಾದಿ ಗ್ರಾಮೋದ್ಯೋಗ ಕೇಂದ್ರ ಅಭಿವೃದ್ಧಿಗೆ 40 ಕೋಟಿ ರೂ. ನೀಡಲಾಗುವುದು. ಈ ವರ್ಷ 20 ಕೋಟಿ ಖರ್ಚು ಮಾಡಲಾಗುವುದು ಎಂದರು.

ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಜಾಗ, ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು 30 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ ಮಾಡಲಾಗುವುದು, ಬುಡಕಟ್ಟು ಜನರು ವಾಸಿಸುವ ಕಡೆಗಳಲ್ಲಿ ಮೂಲ ಸೌಕರ್ಯ ಒದಗಿಸಲಾಗುವುದು ಹಾಗೂ ಚಾಮರಾಜನಗರ, ಮೈಸೂರು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.

ಚಾಮರಾಜ ನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲಾಗುವುದು, ಅಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಕ್ರೀಡಾಂಗಣ ಅಭಿವೃದ್ಧಿಗೆ 15 ಕೋಟಿ ರೂ. ಕೊಡಲಾಗುವುದು ಎಂದು ತಿಳಿಸಿದರು.

ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ

ಈ ಸಂದರ್ಭದಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಖಂಡನಾ ನಿರ್ಣಯದ ಪ್ರಸ್ತಾಪ ಮಾಡಿದ ಸಿಎಂ ಸಿದ್ದರಾಮಯ್ಯ, ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ. ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಯಿತು. ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಮ್ಮ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ...

ನಂದಿಗ್ರಾಮ ಉಪಚುನಾವಣೆ | ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ: ಜೈಲಿನಿಂದ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಆರೋಪ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮ ಉಪಚುನಾವಣೆಯ ಅಖಾಡದ ಕಾಂಗ್ರೆಸ್...

‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು...