ಭಕ್ತವತ್ಸಲ ಆಯೋಗ ಶಿಫಾರಸ್ಸು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧಾರ

Date:

Advertisements

ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಡಿಪಿಎಆರ್ ನಿಯಂತ್ರಣಕ್ಕೆ ತರುವ ಶಿಫಾರಸ್ಸನ್ನು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.

Advertisements

ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.

5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು 28.02.2025 ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಆರೋಗ್ಯ ಕ್ಷೇಮ ಕೇಂದ್ರ

563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಪ್ರಯೋಗಾಲಯಗಳನ್ನು ಅಗತ್ಯವಿರುವ ಸಾಮಗ್ರಿಗಳನ್ನು ರೂ.2964.20 ಲಕ್ಷಗಳು ಹಾಗೂ ರೂ.2402.28 ಲಕ್ಷಗಳ ಔಷಧಿಗಳು ಒಟ್ಟು ರೂ.53.66 ಕೋಟಿಗಳ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಭರಿಸಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳ ಮುಖಾಂತರ ಖರೀದಿಸಿ ಸರಬರಾಜು ಮಾಡಲು ಸಚಿವ ಸಂಪುಟ ಒಪ್ಪಿದೆ.

2024-25ನೇ ಸಾಲಿನ ಆಯವ್ಯಯ ಕಂಡಿಕೆ 114ರ ಘೋಷಣೆಯನ್ವಯ 100 ಹಾಸಿಗೆಗಳ ಸಾಮರ್ಥ್ಯದ 07 ತಾಲ್ಲೂಕು ಆಸ್ಪತ್ರೆಗಳ (ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳು) ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳಿಗೆ ತಗಲುವ ವೆಚ್ಚವನ್ನು ರಾಜ್ಯವಲಯದ ಲೆಕ್ಕ ಶೀರ್ಷಿಕೆ ನಬಾರ್ಡ್ ಯೋಜನೆಯಡಿ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ಕೊಪ್ಪಳ ಜಿಲ್ಲೆ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಎರಡನೇ ಹಂತದ/ಹೆಚ್ಚುವರಿ ಕಾಮಗಾರಿಗಳ ಪರಿಷ್ಕೃತ ಮೊತ್ತ ರೂ.59.32 ಕೋಟಿಗಳ ಅಂದಾಜಿಗೆ ಅನುಮೋದನೆ ನೀಡಲು; ಸದರಿ ಕಾಮಗಾರಿಗೆ ಬಿಡುಗಡೆ ಗೊಳಿಸಬೇಕಾಗಿರುವ ರೂ.1.83 ಕೋಟಿಗಳನ್ನು ಬಿಡುಗಡೆಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ “ಕಾನೂನು ಮತ್ತು ನೀತಿ-2023” ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಅಂಶ 28ರನ್ವಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಜಮೀನು

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಧಾರ್ಮಿಕ ಮತ್ತು ಇನ್ನಿತರೆ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದ ಸ.ನಂ.434 ರಲ್ಲಿ 20 ಗುಂಟೆ “ಗೋಮಾಳ” ಜಮೀನನ್ನು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100 ರಷ್ಟು ಮತ್ತು ಇನ್ನಿತರೆ ಶಾಸನಬದ್ದ ಶುಲ್ಕಗಳನ್ನು ಮತ್ತು ಜಮೀನಿನ ಅನಧೀಕೃತ ಅಧಿಬೋಗಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ರಂತೆ ದಂಡವನ್ನು ವಿಧಿಸಿ, ಮಂಜೂರು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣ

ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿದೆ.

355.47 ಕೋಟಿ ವೆಚ್ಚದಲ್ಲಿ ಬಸ್‌ಗಳ ಖರೀದಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ.363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಸರಬರಾಜಾಗಿರುವ 20 ಬಸ್ಸುಗಳಿಗೆ ಪ್ರತಿ ಬಸ್‍ಗೆ ರೂ.41.72 ಲಕ್ಷಗಳಂತೆ ಒಟ್ಟು ರೂ.835.00 ಲಕ್ಷಗಳ ಪರಿಷ್ಕೃತ ವೆಚ್ಚವನ್ನು ಭರಿಸಲು; 820 ಬಸ್ಸುಗಳನ್ನು ಪ್ರತಿ ಬಸ್‍ಗೆ ರೂ.43.35 ಲಕ್ಷಗಳಂತೆ ಒಟ್ಟು ರೂ.355.47 ಕೋಟಿಗಳ ವೆಚ್ಚದಲ್ಲಿ ಖರೀದಿಸಲು; ಸಚಿವ ಸಂಪುಟ ನಿರ್ಣಯಿಸಿದೆ.

ಇಂದಿರಾ ಕಿಚನ್-ಕಮ್- ಕ್ಯಾಂಟೀನ್‍ಗಳಿಗೆ ಹೊಸ ಮೆನುವಿನಂತೆ ಅಡುಗೆ ಉಪಕರಣ ಹಾಗೂ ಪೀಠೋಪಕರಣಗಳನ್ನು ಒಟ್ಟು ರೂ.84.58 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊತ್ತ ರೂ.2000.00 ಕೋಟಿಗಳ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5 ರಷ್ಟು ಮೊತ್ತ ರೂ.150.00 ಕೋಟಿಗಳು, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿಗಳಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಸಚಿವ ಸಂಪುಟ ಅನುಮೋದಿಸಿದೆ.

ಬಾಗಲಕೋಟೆ ಸಕ್ಕರೆ ಕಾರ್ಖಾನೆ 30 ವರ್ಷಕ್ಕೆ ಗುತ್ತಿಗೆ

ರೈತರ ಸಹಕಾರಿ ಸಕ್ಕರೆ ಕಾರ್ಖಾನೆ, ರನ್ನನಗರ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ ಈ ಕಾರ್ಖಾನೆಯನ್ನು 2024-25ನೇ ಹಂಗಾಮಿನಿಂದ 30 ವರ್ಷಗಳ ಅವಧಿಗೆ (Lease Rehabilitate Operate Transfer) LROT ಆಧಾರದ ಮೇಲೆ ಇದ್ದಲ್ಲಿ ಇದ್ದಂತೆಯೇ (As is where is basis) ಖಾಸಗಿಯವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಸಿ ಎಂ ಶಿವಕುಮಾರ್‌ಗೆ 50 ಲಕ್ಷ ಪರಿಹಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಿಧನರಾದ ಅಧೀಕ್ಷಕ ಅಭಿಯಂತರ ಸಿ.ಎಂ ಶಿವಕುಮಾರ್ ಇವರಿಗೆ ರೂ.50.00 ಲಕ್ಷಗಳ ಪರಿಹಾರ ಹಾಗೂ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ಮತ್ತು ತೀವ್ರ ಗಾಯಗೊಂಡ ಉಳಿದವರಿಗೆ ಪರಿಹಾರ ಧನವನ್ನು ಇಲಾಖಾ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಿ, ಸರ್ಕಾರಿ ಉದ್ಯೋಗವನ್ನು ನೀಡಲು ಸಚಿವ ಸಂಪುಟ ಅನುಮೋದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X