ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದು, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ.

ನೂತನ ಸಚಿವರು ರಾಜಭವನದಲ್ಲಿ ಶನಿವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರ ತಮ್ಮ ಸಚಿವ ಸಂಪುಟದ ಸಹೋದ್ಯೋಗಗಳಿಗೆ ಭಾನುವಾರ ಮಧ್ಯ ರಾತ್ರಿ ಹಂಚಿಕೆ ಮಾಡಿದ್ದಾರೆ.

ಹಣಕಾಸು, ವಾರ್ತಾ ಮತ್ತು ಪ್ರಸಾರ, ಗುಪ್ತಚರ ಇಲಾಖೆಯನ್ನು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ತಮ್ಮ ಬಳಿ ಉಳಿಸಿಕೊಂಡಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಮ್ಮ ಬೇಡಿಕೆಯಂತೆ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Advertisements

ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜತೆಯಲ್ಲಿ ಸಂಪುಟ ದರ್ಜೆಯ ಸಚಿವರಾಗಿ, ಜಿ. ಪರಮೇಶ್ವರ, ಕೆಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ, ಜಮೀರ್ ಅಹ್ಮದ್ ಖಾನ್‌, ಎಂ ಬಿ ಪಾಟೀಲ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಮೂಲಕ ಮುಖ್ಯಮಂತ್ರಿ ಹೊರತುಪಡಿಸಿ, 33 ಸ್ಥಾನಗಳನ್ನೂ ಭರ್ತಿ ಮಾಡಲಾಗಿದೆ.

ಯಾರಿಗೆ ಯಾವ ಖಾತೆ?

ಮುಖ್ಯಮಂತ್ರಿ ಸಿದ್ದರಾಮಯ್ಯ – ಹಣಕಾಸು, ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಮತ್ತು ಹಂಚಿಕೆ ಆಗದೆ ಉಳಿದ ಖಾತೆಗಳು.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ – ಜಲಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ
ಜಿ ಪರಮೇಶ್ವರ – ಗೃಹ (ಗುಪ್ತಚರ ಹೊರತುಪಡಿಸಿ)
ಎಚ್‌ ಕೆ ಪಾಟೀಲ್‌ – ಕಾನೂನು ಮತ್ತು ಸಂಸದೀಯ ವ್ಯವಹಾರ, ಪ್ರವಾಸೋದ್ಯಮ
ಕೆ ಎಚ್‌ ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ
ಕೆ ಜೆ ಜಾರ್ಜ್‌ – ಇಂಧನ
ಎಂ ಬಿ ಪಾಟೀಲ್‌ – ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ
ರಾಮಲಿಂಗರೆಡ್ಡಿ – ಸಾರಿಗೆ, ಮುಜರಾಯಿ
ಸತೀಶ್‌ ಜಾರಕಿಹೊಳಿ – ಲೋಕೋಪಯೋಗಿ
ಪ್ರಿಯಾಂಕ್‌ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌
ಜಮೀರ್‌ ಅಹ್ಮದ್‌ ಖಾನ್ – ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತ
ಕೃಷ್ಣೇಬೈರೇಗೌಡ – ಕಂದಾಯ (ಮುಜರಾಯಿ ಹೊರತು)
ದಿನೇಶ್‌ ಗುಂಡೂರಾವ್‌ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಎಚ್‌ ಚಲುವರಾಯಸ್ವಾಮಿ – ಕೃಷಿ
ಕೆ ವೆಂಕಟೇಶ್‌ – ಪಶುಸಂಗೋಪನೆ ಮತ್ತು ರೇಷ್ಮೆ
ಡಾ. ಎಚ್‌ ಸಿ ಮಹದೇವಪ್ಪ – ಸಮಾಜ ಕಲ್ಯಾಣ
ಈಶ್ವರ್‌ ಖಂಡ್ರೆ – ಅರಣ್ಯ, ಜೈವಿಕ ಮತ್ತು ಪರಿಸರ
ಕೆ ಎನ್‌ ರಾಜಣ್ಣ – ಸಹಕಾರ (ಕೃಷಿ ಮಾರುಕಟ್ಟೆ ಹೊರತುಪಡಿಸಿ)
ಶರಣಬಸಪ್ಪ ದರ್ಶನಾಪುರ್‌ – ಸಣ್ಣ ಕೈಗಾರಿಕೆ, ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆ
ಶಿವಾನಂದ ಪಾಟೀಲ್‌ – ಅಬಕಾರಿ
ಎಸ್‌ ಎಸ್‌ ಮಲ್ಲಿಕಾರ್ಜುನ್‌ – ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ
ಶಿವರಾಜ ಎಸ್‌ ತಂಗಡಿ – ಹಿಂದುಳಿದ ವರ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ
ಶರಣ್‌ ಪ್ರಕಾಶ್‌ ಪಾಟೀಲ್‌ – ವೈದ್ಯಕೀಯ ಶಿಕ್ಷಣ, ಕೌಶಲ ಅಭಿವೃದ್ಧಿ
ಮಂಕಾಳವೈದ್ಯ – ಮೀನುಗಾರಿಕೆ, ಬಂದರು ಮತ್ತು ಒಳಸಾರಿಗೆ
ಲಕ್ಷ್ಮೀ ಹೆಬ್ಬಾಳಕರ – ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ, ಹಿರಿಯರ ಕಲ್ಯಾಣ
ರಹೀಮ್‌ ಖಾನ್‌ – ಪೌರಾಡಳಿತ, ಹಜ್‌
ಡಿ ಸುಧಾಕರ್‌ – ಸಾಂಖ್ಯಿಕ ಮತ್ತು ಯೋಜನೆ
ಸಂತೋಷ್‌ ಲಾಡ್‌ – ಕಾರ್ಮಿಕ
ಎಚ್ ಎಸ್‌ ಬೋಸರಾಜು – ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಷಾನ
ಬೈರತಿ ಸರೇಶ್‌ – ನಗರಾಭಿವೃದ್ಧಿ ಮತ್ತು ನಗರ ಯೋಜನೆ(ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್‌ ಹೊರತುಪಡಿಸಿ)
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಡಾ. ಎಂ ಸಿ ಸುಧಾಕರ್‌ – ಉನ್ನತ ಶಿಕ್ಷಣ
ಬಿ ನಾಗೇಂದ್ರ – ಯುವಜನಸೇವೆ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ

ಈ ಸುದ್ದಿ ಓದಿದ್ದೀರಾ? ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X