ರಾಜ್ಯ ಸರ್ಕಾರ ಮುಂದಿನ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಒಪ್ಪಿಗೆ ನೀಡಲಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದೆ. ಆದರೆ, ಹಲವೆಡೆ ಮುಂಗಾರು ಮಳೆ ವಿಳಂಬವಾದ ಕಾರಣ ನೀರಿನ ಸಮಸ್ಯೆಗೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.
“ರೈತರು ಮುಂಗಾರು ಬಿತ್ತನೆ ಮಾಡಿದ್ದಾರೆ. ಆದರೆ, ನೀರಿಲ್ಲದೆ ಬೆಳೆ ಒಣಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಕಾದು ನೋಡಬೇಕು. ಮಳೆಯಾಗದಿದ್ದರೆ, ಮೋಡ ಬಿತ್ತನೆಗೆ ಸರ್ಕಾರ ನಿರ್ಧರಿಸಲಿದೆ. ಈ ಬಗ್ಗೆ ಜೂನ್ 15ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ನಿರ್ಧರಿಸಲಿದೆ” ಎಂದು ಅವರು ಹೇಳಿದ್ದಾರೆ.
“ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿ ಮತ್ತು ಸಚಿವರು ನಿರ್ಧರಿಸುತ್ತಾರೆ” ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.