ಪ. ಬಂಗಾಳ | ಪ್ರತಿ ಜಿಲ್ಲೆಯಲ್ಲೂ ಎಸ್‌ಐಆರ್ ದಾಖಲೆಗಳ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೋಲ್ಕತ್ತಾ ಹೈಕೋರ್ಟ್

Date:

ಪಶ್ಚಿಮ ಬಂಗಾಳದಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯನ್ನು ಮೇಲ್ವಿಚಾರಣೆ ಮಾಡಲು ಕೋಲ್ಕತ್ತಾ ಹೈಕೋರ್ಟ್ ಭಾನುವಾರ ಪಶ್ಚಿಮ ಬಂಗಾಳದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

- Advertisement -

ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್, ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಅಗರ್ವಾಲ್ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್) ನಂದಿನಿ ಚಕ್ರವರ್ತಿ ಅವರೊಂದಿಗೆ ಸಭೆ ನಡೆಸಿ, ಬಳಿಕ ಪ್ರತಿ ಜಿಲ್ಲೆಯಲ್ಲಿ ಸಮಿತಿಯನ್ನು ರಚಿಸಲು ನಿರ್ಧರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಸುಮಾರು 250 ನ್ಯಾಯಾಂಗ ಅಧಿಕಾರಿಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಅವರ ನೇತೃತ್ವದ ಸಮಿತಿಯು ಸೋಮವಾರದಿಂದ ಎಸ್‌ಐಆರ್ ದಾಖಲೆಗಳ ಪರಿಶೀಲನೆಯನ್ನು ಪ್ರಾರಂಭಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಕೂಡ ಅಧಿಸೂಚನೆ ಹೊರಡಿಸಿದ್ದಾರೆ.

ಶುಕ್ರವಾರದ ಸುಪ್ರೀಂ ಕೋರ್ಟ್ ಸೂಚನೆಯಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಶನಿವಾರ ಮುಖ್ಯ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರು, ಸಿಇಒ ಮನೋಜ್ ಅಗರ್ವಾಲ್, ಚುನಾವಣಾ ಆಯೋಗದ ಪ್ರತಿನಿಧಿಗಳು ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವು ಫೆಬ್ರವರಿ 28ರೊಳಗೆ ನಡೆಯುತ್ತಿರುವ ಎಸ್‌ಐಆರ್ ಅನ್ನು ಹೇಗೆ ಪೂರ್ಣಗೊಳಿಸುವುದು ಎಂಬುದರ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಎಸ್‌ಐಆರ್ ಬಳಿಕದ ಪಟ್ಟಿಗಳನ್ನು ಬಿಡುಗಡೆ ಮಾಡುವ ಮೊದಲು ‘ತಾರ್ಕಿಕ ವ್ಯತ್ಯಾಸಗಳಿಗೆ’ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮಾರ್ಚ್ 9ರವರೆಗೆ ನ್ಯಾಯಾಂಗ ಅಧಿಕಾರಿಗಳ ರಜೆಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ರಜೆಯಲ್ಲಿರುವ ನ್ಯಾಯಾಧೀಶರು ಸಹ ಸೇವೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ ಸೇವೆ) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಇಲ್ಲದಿದ್ದರೆ ಯಾವುದೇ ನ್ಯಾಯಾಂಗ ಅಧಿಕಾರಿ ರಜೆ ತೆಗೆದುಕೊಳ್ಳುವಂತಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...