ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ: ಕೆ ಎಸ್ ಈಶ್ವರಪ್ಪ

Date:

ಪಕ್ಷಕ್ಕೆ ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ. ಆದರೆ ನಾನಿನ್ನು ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ತಿಳಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಹೊರಬಿದ್ದರೂ ತನ್ನ ಅಸ್ತಿತ್ವಕ್ಕೇನೋ ತೊಂದರೆಯಾಗಿಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಸ್ನೇಹಿತರೊಬ್ಬರು ದಿಗ್ಗಜರ ನಡುವೆ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಗರಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಅಂಶವನ್ನು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸುತ್ತೇನೆ. ಬಿಜೆಪಿಗೆ ತನ್ನ ಪ್ರಧಾನ್ಯತೆ ಎಂದು ಕೆ ಎಸ್‌ ಈಶ್ವರಪ್ಪ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಆ ಸ್ಥಾನವನ್ನು ಸಹ ಕಾಂಗ್ರೆಸ್‌ನವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ದೇವರ ಸ್ಥಾನದಲ್ಲಿರುವ ಸ್ವಾಮೀಜಿಗಳಿಂದ ಇಂತವರಿಗೆ ಸಿಎಂ ಸ್ಥಾನ ಕೊಡಿಸಿ ಎಂದು ಹೇಳಿಸುತ್ತಿದ್ದಾರೆ. ಇಂತಹ ಹೇಳಿಕೆ ಕೊಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ನಿಮ್ಮ ಅಧಿಕಾರಕ್ಕೆ ಜಾತಿ ಮಧ್ಯ ತರುವುದನ್ನು ಖಂಡಿಸುತ್ತೇ ನೆ. ಇದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಿರ್ಧರಿಸಿಕೊಳ್ಳಿ. ಇದರ ಬಹಿರಂಗ ಚರ್ಚೆ, ಹೇಳಿಕೆ ಬೇಡ. ಸ್ವಾಮೀಜಿಗಳನ್ನು ನಿಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ ಎಂದು ಕೆ ಎಸ್‌ ಈಶ್ವರಪ್ಪ ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಕೆ ಎಸ್‌ ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯದ್ದು ಬಿ ವೈ ರಾಘವೇಂದ್ರ ವಿರುದ್ಧ ಪಕ್ಷೇತರನಾಗಿ ಸ್ಪರ್ಧಿಸಿದ ನಂತರ ಪಕ್ಷ ಅವರನ್ನು 6 ವರ್ಷ ಅವಧಿಗೆ ಉಚ್ಚಾಟಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...