ಎರಡೂ ಕೈಗಳು ತಟ್ಟಿದರೆ ಚಪ್ಪಾಳೆ: ಅತ್ಯಾಚಾರ ಸಂತ್ರಸ್ತೆ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕನ ವಿವಾದಿತ ಹೇಳಿಕೆ

Date:

  • ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ
  • ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ದೂರು ನೀಡಿದ್ದರು

ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿಯ ಕಾಂಗ್ರೆಸ್‌ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಅತ್ಯಾಚಾರ ನಡೆದಿದೆ ನ್ಯಾಯ ಕೊಡಿಸಿ ಎಂದು ಹೇಳಿದ ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ.

- Advertisement -

ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದಲ್ಲಿ ಮಹಿಳೆಯ ಮೇಲೆ ಕಾಂಗ್ರೆಸ್ ಮುಖಂಡನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು ದೂರು ದಾಖಲಾದರೂ ಕ್ರಮಕ್ಕೆ ಸಂಬಂಧಪಟ್ಟವರು ಮುಂದಾಗಿರುವುದಿಲ್ಲ. ಹೀಗಾಗಿ ಸಂತ್ರಸ್ತ ಮಹಿಳೆಯ ಮಾವ ನ್ಯಾಯಕ್ಕಾಗಿ ಎಸ್ಪಿ, ಮಾಜಿ ಶಾಸಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾಜಿ ಶಾಸಕ ಈ ರೀತಿ ಹೇಳಿರುವ ಆಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅಕ್ಟೋಬರ್ 10 ರಂದು ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡರೂ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

ಹೀಗಾಗಿ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ಎಸ್ಪಿಗೆ ದೂರು ನೀಡಿದ್ದರು. ಹಾಗೆ ನ್ಯಾಯಕೊಡಿಸುವಂತೆ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಮನವಿ ಮಾಡಿದರು.

ಆದರೆ ಅಮರೇಗೌಡ ಬಯ್ಯಾಪುರ ಅವರು ಆರೋಪಿ ಪರವಾಗಿಯೇ ನಿಲುವು ತಾಳಿದ್ದು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಬಾರದಿತ್ತು ಎಂದು ಯಮನೂರಪ್ಪ ಅವರಿಗೆ ಹೇಳಿದ್ದಾರೆ. ಅಲ್ಲದೆ “ನಿಮ್ಮ ಮರ್ಯಾದೆಯನ್ನು ನೀವೆ ಕಳೆದುಕೊಳ್ಳುತ್ತಿದ್ದೀರಾ, ಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡೋಣ. ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಸೂಕ್ಷ್ಮ ವಿಚಾರ ಇದು, ಮರ್ಯಾದೆ ಪ್ರಶ್ನೆ ಇದೆ ಯೋಚಿಸು” ಎಂದು ಅಮರೇಗೌಡ ಬಯ್ಯಾಪುರ ಸಂತ್ರಸ್ತೆ ಮಾವನಿಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...