ಕಾರ್ ಪೂಲಿಂಗ್‌: ತೇಜಸ್ವಿ ಸೂರ್ಯ ಕ್ಷಮೆ ಕೇಳದಿದ್ದರೆ ಶಕ್ತಿ ಪ್ರದರ್ಶನದ ಎಚ್ಚರಿಕೆ ನೀಡಿದ ಸಾರಿಗೆ ಒಕ್ಕೂಟ

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರವರು ಕಾರ್ ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಮತ್ತು ಹೇಳಿಕೆಯನ್ನು ಹಿಂಪಡೆಯುವಂತೆ ಶುಕ್ರವಾರ(ಅ.13) ಸಂಸದರ ಕಚೇರಿಗೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುತ್ತಿಗೆ ಹಾಕಿತು.

ಸಂಸದ ಸೂರ್ಯ ಕಚೇರಿಯಲ್ಲಿ ಇಲ್ಲದ ಕಾರಣ, ಜಯನಗರ ಶಾಸಕ ಸಿ ಕೆ ರಾಮಮೂರ್ತಿ ತೇಜಸ್ವಿ ಹೇಳಿಕೆ ಪರ ಕ್ಷಮೆ ಯಾಚಿಸಿದರು. ಇದೇ ವೇಳೆ ಭಾನುವಾರ ಸಾರಿಗೆ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸಭೆ ಮಾಡುವುದಾಗಿ ತಿಳಿಸಿದರು.

ಸಾರಿಗೆ ಒಕ್ಕೂಟದವರಿಗೆ ಸಂಸದರು ಲಿಖಿತವಾಗಿ ಕ್ಷಮೆಯಾಚನೆ ಭಾನುವಾರದೊಳಗೆ ಕೇಳದೆ ಇದ್ದರೆ ಬೆಂಗಳೂರು ನಗರದಲ್ಲಿ ಸಂಚರಿಸುವ ವಾಹನಗಳ ಮೇಲೆ ಧಿಕ್ಕಾರದ ಪೋಸ್ಟರ್‌ಗಳನ್ನು ಹಚ್ಚಿ ಪ್ರತಿಭಟನೆ ನಡೆಸುತ್ತೇವೆ. ಅದಕ್ಕೂ ಜಗ್ಗದೆ ಹೋದರೆ ಅವರ ವಿರುದ್ಧ ಸಾರಿಗೆ ಸಂಘಟನೆಯ ಒಬ್ಬ ಸದಸ್ಯರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲಾಗುವುದು ಎಂದು ಅಧ್ಯಕ್ಷ ನಟರಾಜ ಶರ್ಮಾ ಎಚ್ಚರಿಕೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಒಕ್ಕೂಟದ ನಾರಾಯಣ ಸ್ವಾಮಿ, ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ಸಂಸದ ತೇಜಸ್ವಿ ಸೂರ್ಯ ಕಾರ್ಪೊರೇಟ್ ಕಂಪನಿಗಳ ಏಜೆಂಟರಂತೆ ಹೇಳಿಕೆ ನೀಡಿದ್ದಾರೆ, ಹೇಳಿಕೆ ವಾಪಸ್ ಪಡೆಯದೆ ಇದ್ದರೆ ಚಾಲಕರ ಶಕ್ತಿಯನ್ನು ಪ್ರದರ್ಶಿಸಲಾಗುವುದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಒಕ್ಕೂಟದ ರಘು ನಾರಾಯಣ ಗೌಡ, ಜಯಣ್ಣ ಮತ್ತಿತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...