ಡಿಕೆಶಿ ವಿರುದ್ಧ ವಾದ ಮಂಡನೆ ವಿಚಾರಕ್ಕೆ ನ್ಯಾಯಮೂರ್ತಿ-ಸಿಬಿಐ ವಕೀಲರ ನಡುವೆ ವಾಗ್ವಾದ

Date:

  • ನ್ಯಾಯಮೂರ್ತಿ ಕೆ ನಟರಾಜನ್‌ ಪೀಠದಿಂದ ಅರ್ಜಿ ವಿಚಾರಣೆ
  • ಏ.17ಕ್ಕೆ ಮುಂದೂಡಿ ಆದೇಶ ಹೊರಡಿಸಿದ ನ್ಯಾಯಾಧೀಶರು

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧ ದಾಖಲಾಗಿರುವ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿ ವಿಚಾರಣೆಯ ವಾದ ಮಂಡನೆ ವಿಚಾರದ ವೇಳೆ ನ್ಯಾಯಮೂರ್ತಿಗಳು ಮತ್ತು ಸಿಬಿಐ ವಕೀಲರ ನಡುವೆ ಬಿರುಸಿನ ವಾಗ್ವಾದ ನಡೆದಿದೆ.

- Advertisement -

ರಾಜ್ಯ ಅಭಿಯೋಜಕರ ಮನವಿ ಮೇರೆಗೆ ಡಿಕೆಶಿ ಪ್ರಕರಣವನ್ನು ನಿಗದಿತ ಸಮಯಕ್ಕೆ ಬದಲಾಗಿ ಮುಂಚಿತವಾಗಿ ಆಲಿಸಲು ನ್ಯಾಯಮೂರ್ತಿ ಕೆ ನಟರಾಜನ್‌ ಅವರು ಕೈಗೆತ್ತಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ವೇಳೆ ಸಿಬಿಐ ಪರ ವಾದ ಮಂಡಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್‌ ಅವರು ಬೇರೊಂದು ಪೀಠದಲ್ಲಿ ವಾದ ಮಂಡನೆ ಮಾಡುತ್ತಿದ್ದರು. ಈ ವಿಷಯವನ್ನು ಸಹೋದ್ಯೋಗಿಗಳು ನ್ಯಾಯಾಧೀಶರ ಗಮನಕ್ಕೆ ತಂದ ಮತ್ತೊಮ್ಮೆ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಅವರ ಮಾತಿಗೆ ಒಪ್ಪಿದ ನ್ಯಾಯಾಧೀಶರು ಕೆಲ ಕಾಲ ಕಾಲಾವಕಾಶ ನೀಡಿದರು. ಕೆಲ ಹೊತ್ತಿನ ನಂತರ, ಮತ್ತೆ ವಿಚಾರಣೆ ಆರಂಭಿಸಿದಾಗಲೂ ಪ್ರಸನ್ನಕುಮಾರ್‌ ಅವರು ಬೇರೊಂದು ಪ್ರಕರಣದ ವಿಚಾರಣೆಯಲ್ಲಿ ಇದ್ದರು.

ನ್ಯಾಯಾಲಯವು ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತು ಡಿ ಕೆ ಶಿವಕುಮಾರ್‌ ಪರ ಹಾಜರಾಗಿದ್ದ ಹಿರಿಯ ವಕೀಲರ ವಾದ ಆಲಿಸಿ, ಪ್ರಕರಣದ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಆದೇಶ ನೀಡಿತು.

ಈ ಸುದ್ದಿ ತಿಳಿಯುತ್ತಿದ್ದಂತೆ ನ್ಯಾ. ನಟರಾಜನ್‌ ಪೀಠದ ಮುಂದೆ ಹಾಜರಾದ ಪ್ರಸನ್ನಕುಮಾರ್‌ ಸಿಬಿಐ ಪರ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? : ಮುರುಘಾಶ್ರೀ ಪ್ರಕರಣ | ಆರೋಪಿ ಶಿವಮೂರ್ತಿ ಶರಣರ ಮೇಲೆ ದೋಷಾರೋಪ ನಿಗದಿ

ಇದಕ್ಕೆ ಕೋಪಗೊಂಡ ನ್ಯಾ. ನಟರಾಜನ್‌ ನಿಮಗಾಗಿ 2 ಸಲ ವಿಚಾರಣೆ ಮುಂದೂಡಲಾಗಿದೆ. ಈಗ ಮತ್ತೆ ವಾದ ಮಂಡನೆಗೆ ಕಾಲಾವಕಾಶ ಕೇಳುತ್ತಿದ್ದೀರಲ್ಲಾ? ನಿಮಗೆ ಬೇಕೆಂದಾಗ ಬಂದು ವಾದ ಮಾಡುತ್ತೇನೆ ಎನ್ನಲು ಇದನ್ನು ಏನೆಂದುಕೊಂಡಿದ್ದೀರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪ್ರಸನ್ನಕುಮಾರ್‌ ‘ಬೇರೊಂದು ಪೀಠದಲ್ಲಿ ವಾದ ಮಂಡನೆ ಇತ್ತು. ಹಾಗಾಗಿ ನಿಮ್ಮ ಮುಂದೆ ಹಾಜರಾಗಲು ಸಾಧ್ಯವಾಗಿಲ್ಲ. ಹಾಗಾಗಿ ನನ್ನ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು ನೀವು ಹೇಳಬೇಕೆಂದುಕೊಂಡಿರುವುದನ್ನು ಲಿಖಿತವಾಗಿ ಸಲ್ಲಿಸಿ ಎಂದರು.

ಇದಕ್ಕೆ ಮರು ಉತ್ತರಿಸಿದ ಪ್ರಸನ್ನಕುಮಾರ್‌ ವಾದ ಆಲಿಸಲು ತಾವು ಸಿದ್ಧವಿಲ್ಲ ಎಂಬ ವಿಚಾರವನ್ನು ನೀವು ಕೂಡ ಆದೇಶದಲ್ಲಿ ದಾಖಲಿಸಬೇಕು ಎಂದು ಪಟ್ಟುಹಿಡಿದರು.

ಇವರಿಬ್ಬರ ಹಗಜಗ್ಗಾಟ ಕೆಲಕಾಲ ಹಾಗೆ ಮುಂದುವರೆಯಿತು. ಕೊನೆಗೆ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ವಿಸ್ತರಿಸಿದ್ದಲ್ಲದೇ, ಸಿಬಿಐ ಪರ ವಕೀಲರ ವಾದ ಆಲಿಸಲು ಏಪ್ರಿಲ್‌ 17ಕ್ಕೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...