ಹಣದ ಕೊರತೆ | ಚುನಾವಣಾ ನಿಧಿ ಸಂಗ್ರಹಿಸಲು ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಹೈಕಮಾಂಡ್‌ ಸೂಚನೆ

Date:

ಆದಾಯ ತೆರಿಗೆ ಇಲಾಖೆಯಿಂದ ಹಲವಾರು ಐಟಿ ನೋಟಿಸ್‌ಗಳನ್ನು ಪಡೆದಿರುವ ಕಾಂಗ್ರೆಸ್‌, ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಹಣದ ಕೊರತೆ ಎದುರಿಸುತ್ತಿದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ತನ್ನ ಜಾಹೀರಾತು ವೆಚ್ಚವನ್ನು ಕಡಿತಗೊಳಿಸಿದೆ. ಜೊತೆಗೆ, ಚುನಾವಣಾ ನಿಧಿ ಸಂಗ್ರಹಿಸಲು ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಸೂಚಿಸಿದೆ.

ಪಕ್ಷದ ಹೈಕಮಾಂಡ್ ಈಗಾಗಲೇ ಎಲ್ಲ ರಾಜ್ಯ ಘಟಕಗಳಿಗೆ ಮನೆ ಮನೆಗೆ ಪ್ರಚಾರದ ಮೂಲಕ ಅಥವಾ ಜನರನ್ನು ತಲುಪುವ ಮೂಲಕ ನಿಧಿ ಸಂಗ್ರಹಿಸಲು ತಿಳಿಸಿದೆ. ಹಾಗೆಯೇ ಸಾಮಾಜಿಕ ಮಾಧ್ಯಮ, ಪ್ರಭಾವಿಗಳಿಂದ ಭಾಷಣ ಮತ್ತು ಕೃತಕ ಬುದ್ಧಿಮತ್ತೆ (ಎಐ) ಬಳಕೆಯ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಮಾಡಿಕೊಳ್ಳುತ್ತಿದೆ.

ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಖಾತೆಗಳನ್ನು ನಿರ್ಬಂಧಿಸಿರುವ ಕಾರಣದಿಂದಾಗಿ ಪ್ರಚಾರಕ್ಕೆ 2 ರೂಪಾಯಿ ಖರ್ಚು ಮಾಡಲು ಕೂಡಾ ಹಿಂದೆ ಮುಂದೆ ನೋಡುವಂತಾಗಿದೆ” ಎಂದು ಹೇಳಿದ್ದಾರೆ. “ಕೇಂದ್ರದ ಬಿಜೆಪಿ ಸರ್ಕಾರವು ವಿಪಕ್ಷಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

“ತಮಿಳುನಾಡಿನಲ್ಲಿ ಕಾಂಗ್ರೆಸ್ ಈಗಾಗಲೇ ಕ್ರೌಡ್ ಫಂಡಿಂಗ್ ಮೂಲಕ ನಿಧಿ ಸಂಗ್ರಹಿಸಲು ಪ್ರಾರಂಭಿಸಿದೆ” ಎಂದು ವಿರುದುನಗರದಿಂದ ಸತತ ನಾಲ್ಕನೇ ಬಾರಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಸಂಸದ ಬಿ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

“ಬಿಜೆಪಿಯು ಪ್ರತಿಪಕ್ಷಗಳನ್ನು ನಾಶ ಮಾಡಲು ಇಡಿ ಮತ್ತು ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ನಾವು ಮನೆ ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ವೆಚ್ಚವನ್ನು ಆದಷ್ಟು ಕಡಿಮೆ ಮಾಡುತ್ತಿದ್ದೇವೆ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಒಂದು ದಿನದ ಪ್ರಚಾರಕ್ಕೆ 50 ಕೋಟಿ ರೂಪಾಯಿ ವೆಚ್ಚವಾಗಬಹುದು. ನಮ್ಮ ಬಳಿ ಅಷ್ಟೊಂದು ಹಣವಿಲ್ಲ” ಎಂದು ತಿಳಿಸಿದರು.

“ನಾವು ಜನರ ಬಳಿಗೆ ಹೋಗಿ ದೇಣಿಗೆ ನೀಡುವಂತೆ ಕೇಳುತ್ತಿದ್ದೇವೆ. ರಾಜ್ಯ ಘಟಕವು ಈಗಾಗಲೇ ಕ್ರೌಡ್ ಫಂಡಿಂಗ್ ಮೂಲಕ ಹಣವನ್ನು ಸಂಗ್ರಹಿಸುತ್ತಿದೆ. ಚುನಾವಣೆ ಸಂದರ್ಭದಲ್ಲೇ ಐಟಿ ಕ್ರಮವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಆರು ತಿಂಗಳ ಹಿಂದೆಯೇ ನಮಗೆ ತಿಳಿದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿತ್ತು” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

ಇನ್ನು ಲೋಕಸಭೆ ಚುನಾವಣೆಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷ ವೈಭವ್ ವಾಲಿಯಾ ಮಾತನಾಡಿ, “ಹಣದ ಕೊರತೆಯಿಂದಾಗಿ, ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಜಾಹೀರಾತು ವೆಚ್ಚದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹಿಂದುಳಿದಿದೆ. ಮೊದಲ ಹಂತದ ಚುನಾವಣೆಗೆ ಕೇವಲ 19 ದಿನಗಳು ಬಾಕಿಯಿದೆ, ಆದರೆ ನಾವು ಈವರೆಗೂ ಪತ್ರಿಕೆ ಅಥವಾ ಟಿವಿಯಲ್ಲಿ ಪ್ರಚಾರ ಆರಂಭಿಸಿಲ್ಲ. ನಾವೀಗ ಸಾಮಾಜಿಕ ಜಾಲತಾಣವನ್ನೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದೇವೆ. ನಾವು ಚುನಾವಣಾ ಬಾಂಡ್‌ಗಳ ಕುರಿತು ಜಾಹೀರಾತು ನೀಡಲು ಪ್ರಯತ್ನಿಸಿದರೂ, ಹೆಚ್ಚಿನ ಪತ್ರಿಕೆಗಳು ಅದನ್ನು ಪ್ರಕಟಿಸಲು ನಿರಾಕರಿಸಿದವು” ಎಂದು ಆರೋಪಿಸಿದರು.

ಇನ್ನು ಕೇರಳದಲ್ಲಿ ಚುನಾವಣಾ ನಿಧಿ ಸಂಗ್ರಹಕ್ಕಾಗಿ ಕೇಂದ್ರ ನಾಯಕತ್ವವು ಸೂಚಿಸಿದ ಬೆನ್ನಲ್ಲೇ ಕೂಪನ್‌ಗಳನ್ನು ಮುದ್ರಿಸಲು ಮತ್ತು ಅವುಗಳನ್ನು ಬೂತ್ ಮಟ್ಟದಲ್ಲಿ ವಿತರಿಸಲು ಕೇರಳ ಕಾಂಗ್ರೆಸ್ ನಿರ್ಧರಿಸಿದೆ. ಇನ್ನು ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಆಕಾಂಕ್ಷಿ ಅಭ್ಯರ್ಥಿಗಳಿಂದ ತಲಾ 50,000 ರೂಪಾಯಿ ಸಂಗ್ರಹಿಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಅಬಕಾರಿ ಪ್ರಕರಣ| ಏ. 23ರವರೆಗೆ ನ್ಯಾಯಾಂಗ ಬಂಧನ, ‘ಸಿಬಿಐ ಅಲ್ಲ ಬಿಜೆಪಿ ಕಸ್ಟಡಿ’ ಎಂದ ಕವಿತಾ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)...

ಕನ್ಹಯ್ಯ ಕುಮಾರ್‌ಗೆ ಲೋಕಸಭಾ ಟಿಕೆಟ್: ದೆಹಲಿಯಿಂದ ಸ್ಪರ್ಧೆ

ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವ...

ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...