ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

Date:

ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ.

- Advertisement -

ಮುನಿರತ್ನ ಅವರನ್ನು ಪೊಲೀಸರು ಶನಿವಾರ ಸಂಜೆ ಸಂಬಂಧಿಸಿದ್ದರು. ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಭಾನುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಮಂಗಳವಾರಕ್ಕೆ ಪೊಲೀಸ್‌ ಕಸ್ಟಡಿಯ ಅವಧಿ ಮುಗಿದಿದ್ದರಿಂದ, ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಇದೀಗ, ನ್ಯಾಯಾಲಯವು ಮುಗಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿಚಾರಣೆಯನ್ನು ಬುಧವಾರಕ್ಕೆ (ಸೆ.18) ನಿಗದಿ ಮಾಡಿದೆ.

ಮುನಿರತ್ನ ಅವರು ಲಂಚಕ್ಕೆ ಬೇಡಿಕೆ ಇಟ್ಟು, ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರು ಶುಕ್ರವಾರ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಆಡಿಯೋ ಹೊರಬಂದ ಬಳಿಕ, ಜಾತಿ ನಿಂದನೆ ಆರೋಪದ ಮೇಲೆ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುನಿರತ್ನ ಅವರನ್ನು ಪೊಲೀಸರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...