ಜಾತಿ ದೌರ್ಜನ್ಯ ಪ್ರಕರಣ | ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದು, ಪ್ರಸ್ತುತ ಶೇ.7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದೆ” ಎಂದರು.

“ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

Advertisements

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

“ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ” ಎಂದರು.

ಇ.ಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ

“ಇ.ಡಿ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ” ಎಂದು ತಿಳಿಸಿದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ

ಇ.ಡಿ ನೋಟಿ‌ಸ್‌ ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದರು.

ನ್ಯಾಯ ದೊರೆಯುವ ಭರವಸೆ

ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ನಾವು ಬಸವಣ್ಣನವರ ಅನುಯಾಯಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಕುಂಭ ಮೇಳದಲ್ಲಿ ಮಿಂದೆದ್ದರೆ ಬಡತನ ಹೋಗುವುದಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ನಾವು ಬಸವಣ್ಣನವರ ಅನುಯಾಯಿಗಳು, ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂಬ ಬಸವಣ್ಣನವರ ಮಾತಿನಲ್ಲಿ ನಮಗೆ ನಂಬಿಕೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X