ಜಾತಿ ಗಣತಿ | ಸಿಎಂ ಸಿದ್ದರಾಮಯ್ಯ ಅವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳು: ಆರ್‌ ಅಶೋಕ್

Date:

Advertisements

ಜಾತಿ ಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನು ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ” ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳನ್ನು ಕೇಳಬಯಸುವೆ. ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ? ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ ಎಂದು ಪ್ರಶ್ನಿಸಿದ್ದಾರೆ.

Advertisements

“ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ‌ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ” ಎಂದು ಕೇಳಿದ್ದಾರೆ.

“ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ? ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನು ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X