ಮುಡಾ ಹಗರಣ ಮುಚ್ಚಿಕೊಳ್ಳಲು ಜಾತಿಗಣತಿ ನಾಟಕ: ಹೆಚ್ ಡಿ ಕುಮಾರಸ್ವಾಮಿ ಆರೋಪ

Date:

ಮುಡಾ ಹಗರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ದೂರಿದರು.

- Advertisement -

ಬೆಂಗಳೂರಿನ ತಮ್ಮ ನಿವಾಸದ ಬಳಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು

“ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಆ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ” ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

“ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ” ಎಂದು ಕೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

“ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ” ಎಂದರು.

ಜಾತಿ ಗಣತಿ ವರದಿ ಇಟ್ಟುಕೊಂಡು ಚುನಾವಣೆಗೆ ಹೋಗಿ

“ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ” ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...