ಜನಪ್ರತಿನಿಧಿಗಳಿಗೆ ಜಾತಿ ಜನಗಣತಿ ವಿಚಾರದಲ್ಲಿ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ರಾಯಚೂರಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಲಿಂಗಾಯತರು, ಒಕ್ಕಲಿಗರು ಜಾತಿ ಜನಗಣತಿ ವಿರೋಧ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನು ಹಿಂದುಳಿದವರ ಪರ ಎನ್ನುತ್ತಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಇಷ್ಟು ದಿನ ಆದರೂ ಯಾಕೆ ಜಾತಿಗಣತಿ ಬಿಡುಗಡೆ ಮಾಡಿಲ್ಲ” ಎಂದು ಪ್ರಶ್ನಿಸಿದರು.
ಹಿಂದು ರಾಷ್ಟ್ರ ಮಾಡುತ್ತೇವೆ ಎಂದು ಪೇಜಾವರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, “ಶ್ರೀಗಳಿಗೆ ಸಾಷ್ಟಾಂಗ ನಮಸ್ಕಾರ ಹಾಕುವೆ. ಅವರ ಮಾರ್ಗದರ್ಶನದಲ್ಲಿ ಹಿಂದು ರಾಷ್ಟ್ರ ನಿರ್ಮಾಣಕ್ಕೆ ನಾವು ಸಿದ್ಧರಿದ್ದೇವೆ. ಸಿದ್ದರಾಮಯ್ಯರಿಗೆ ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂದಿದ್ದರೆ ಖುಷಿಯಾಗುತ್ತಿತ್ತು” ಎಂದು ಲೇವಡಿ ಮಾಡಿದರು.
”ಪ್ರಧಾನಿ ಮೋದಿ ಕೇಂದ್ರ ಸಂಪುಟದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡುವುದಾದರೆ ಸ್ವಾಗತ ಮಾಡುತ್ತೇನೆ. ರೈತರ ಬಗ್ಗೆ ಎಚ್ ಡಿ ದೇವೆಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಸಾಕಷ್ಟು ಕಾಳಜಿ ಇದೆ” ಎಂದು ಹೇಳೀದರು.