ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

Date:

Advertisements
  • ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ನಿಲುವು
  • ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಸಭೆ ಮಾಡಿಲ್ಲ?

“ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್  ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

“ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಭೇದ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು.

Advertisements

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ” ಎಂದು ತಿಳಿಸಿದರು.

ನಿಗಮ ಮಂಡಳಿ: 28ಕ್ಕೆ ಮತ್ತೊಂದು ಸುತ್ತಿನ ಸಭೆ

”ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, “ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳುಮಾಡಿಕೊಳ್ಳುತ್ತೀರಿ” ಎಂದು ಪ್ರತಿಕ್ರಿಯಿಸಿದರು.

ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಾವು ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಧಿಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೈದು ಸಚಿವರನ್ನು ನೇಮಕ ಮಾಡಲಾಗದೇ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗಣ ಬಿದ್ದದ್ದು, ಮೊದಲು ಅದನ್ನು ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X