ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟ ತೀರ್ಮಾನದ ಬಗ್ಗೆ ಸಿಎಂ ವಿವರಿಸಿದ್ದೇನು?

Date:

Advertisements

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ (ಜೂ.12) ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ ಇಂದು ಅಂತಿಮವಾಗಿ ಚರ್ಚೆ ಮಾಡಲು ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಇಂದು ಒಂದೇ ವಿಷಯದ ಮೇಲೆ ಚರ್ಚೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ಕೈಗೊಂಡು ಮನೆ ಮನೆಗೆ ಭೇಟಿ ನೀಡಿ ಸಲ್ಲಿಸಿರುವ ವರದಿಯಾಗಿದೆ. 2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನರಿದ್ದರು. ಈ ಜನಸಂಖ್ಯೆ 2015 ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನರು ಸಮೀಕ್ಷೆಗೆ ಒಳಪಟ್ಟಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದ್ದು 11.4.2015 ರಂದು ಹಾಗೂ 30-5-2015 ರಂದು ಮುಕ್ತಾಯವಾಗಿದೆ. 1.60 ಲಕ್ಷ ಸಿಬ್ಬಂದಿ ಹಾಗೂ 1.33 ಲಕ್ಷ ಉಪಾಧ್ಯಾಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು” ಎಂದು ವಿವರಿಸಿದರು.

Advertisements

ಹೆಚ್.ಡಿ.ಕುಮಾರಸ್ವಾಮಿಯವರು ವರದಿ ಪಡೆಯಲಿಲ್ಲ

“ಹಿಂದೆ 2013-2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮಗೊಂಡಿರಲಿಲ್ಲ. 2018 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದರು. ಪುಟ್ಟರಂಗಶೆಟ್ಟರು ಅವರು ಹಿಂದುಳಿದ ವರ್ಗಗಳ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು. ಅಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜು ಹಾಗೂ ಸದಸ್ಯರು ಸಚಿವ ಪುಟ್ಟರಂಗಶೆಟ್ಟರನ್ನು ಭೇಟಿ ಮಾಡಿ ವರದಿ ಪಡೆಯಬೇಕು ಎಂದು ಕೋರಿದಾಗ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಒತ್ತಡ ಹಾಕಿ ವರದಿಯನ್ನು ಪಡೆಯಬಾರದು ಎಂದಿದ್ದರಿಂದ ಅವರು ವರದಿ ಪಡೆಯಲಿಲ್ಲ. ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಕೂಡ ಬಿಜೆಪಿಯವರೇ ಆಗಿದ್ದರು. ಜಯಪ್ರಕಾಶ್ ಹೆಗಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಶಿಫಾರಸ್ಸು ಮಾಡಿದರು. ಶಿಫಾರಸ್ಸುಗಳನ್ನು 29-2-2024 ರಂದು ಸರ್ಕಾರಕ್ಕೆ ಸಲ್ಲಿಸಿದರು. ಕಾಂತರಾಜು ಅವರು ಕೂಡ ಈ ಸಂದರ್ಭದಲ್ಲಿ ಇದ್ದರು” ಎಂದು ತಿಳಿಸಿದರು.

“ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿಯ ಬಗ್ಗೆ ಚರ್ಚೆ ಮಾಡಲಾಗಲಿಲ್ಲ. ನಂತರ ನಮ್ಮ ಸರ್ಕಾರ ವರದಿಯನ್ನು ಪಡೆದು 2025 ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವ ಸಂಪುಟದಲ್ಲಿ ಮಂತ್ರಿ ಮಂಡಲದ ಸದಸ್ಯರು ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚೆ ಮಾಡಿದೆ” ಎಂದರು.

ಪಕ್ಷದ ವರಿಷ್ಠರ ಸಲಹೆ

“ಪಕ್ಷದ ವರಿಷ್ಠರು ನನ್ನನ್ನು ಮತ್ತು ಉಪಮುಖ್ಯಮಂತ್ರಿಗಳನ್ನು ಕರೆದು ವರದಿ ಹತ್ತು ವರ್ಷಗಳಷ್ಟು ಹಳೆಯದಾಗಿದ್ದು, ಕಾನೂನು ಪ್ರಕಾರ ಅನೇಕ ಬದಲಾವಣೆಗಳು ಮತ್ತು ಬೆಳವಣಿಗೆಗಳು ಆಗಿರುತ್ತವೆ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಿದ್ದುಪಡಿ ವಿಧೇಯಕ (2014) ಸೆಕ್ಷನ್ 11 ಕಲಂ (1) ರಂತೆ ರಾಜ್ಯ ಸರ್ಕಾರವು ಯಾವುದೇ ಸಮಯದಲ್ಲಿ ಈ ಅಧಿನಿಯಮ ಜಾರಿಗೆ ಬಂದ ದಿನಾಂಕದಿಂದ 10 ವರ್ಷಗಳ ಅವಧಿ ಮುಕ್ತಾಯವಾದಾಗ, ಮತ್ತು ಅದರ ನಂತರ ಬರುವ ಪ್ರತಿ 10 ವರ್ಷಗಳು ಮುಕ್ತಾಯವಾಗುವಾಗ ಹಿಂದುಳಿದ ವರ್ಗವಾಗಿ ಉಳಿಯದೇ ಹೋಗಿರುವ ವರ್ಗಗಳನ್ನು ಪಟ್ಟಿಯನ್ನು ತೆಗೆದುಹಾಕುವುದು ಅಥವಾ ಹೊಸ ಹಿಂದುಳಿದ ವರ್ಗಗಳನ್ನು ಪಟ್ಟಿಗೆ ಸೇರಿಸುವದು ಎಂದು ಸ್ಪಷ್ಟವಾಗಿದೆ ಹೇಳಿದೆ. ಕಲಂ 2 ರಲ್ಲಿ ಹೇಳಿದಂತೆ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯಕ್ ಅವರ ಸಲಹೆಯನ್ನೂ ಪಡೆಯಲಾಗುವುದು” ಎಂದು ತಿಳಿಸಿದರು.

“ನಿವೃತ್ತ ಅಡ್ವೊಕೇಟ್ ಜನರಲ್ ಮಧುಸೂದನ ನಾಯಕ್ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಇನ್ನೂ ಸದಸ್ಯರುಗಳ ನೇಮಕ ಆಗಬೇಕಿದೆ. ಸಮೀಕ್ಷೆ ಕುರಿತು ಚರ್ಚಿಸಲು ಅವರನ್ನು ಸಂಪರ್ಕಿಸಲಾಗುತ್ತದೆ” ಎಂದು ಹೇಳಿದರು.

ಆಯೋಗದ ಸಲಹೆ ಪಡೆಯಲಾಗುವುದು

“ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ- 1995ರ ಸೆಕ್ಷನ್ 9 (2) ರಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ತಿದ್ದುಪಡಿ ಆಗಿರುವುದು 2014ರಲ್ಲಿ. ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಮೇಲ್ವಿಚಾರಣೆ ಮಾಡಬೇಕು ಎಂದು ಸೆಕ್ಷನ್ (3) ರಲ್ಲಿ ಹೇಳಿದೆ. ಸೆಕ್ಷನ್ 9 (1)ರ ಅನ್ವಯ ಅರ್ಜಿಗಳನ್ನು ಪರಿಶೀಲಿಸಿ ಹಿಂದುಳಿದ ವರ್ಗಗಳಿಗೆ ಸೇರಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆಯೋಗಕ್ಕೆ ಇರುತ್ತದೆ ಎಂದು ಹೇಳಲಾಗಿದೆ. ಆದ್ದರಿಂದ ಹೊಸದಾಗಿ ಸಮೀಕ್ಷೆ ನಡೆಸುವ ಕುರಿತು ಇಂದು ಸಚಿವ ಸಂಪುಟದ ನಿರ್ಧಾರ ಆಗಿದ್ದು ಮುಂದಿನ ದಿನಗಳಲ್ಲಿ ಆಯೋಗದ ಸಲಹೆಯನ್ನೂ ಪಡೆಯಲಾಗುತ್ತದೆ” ಎಂದು ತಿಳಿಸಿದರು.

ಕಾನೂನಿನ ಪ್ರಕಾರ ತೀರ್ಮಾನ

“ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ಮಾಡಿ ಹತ್ತು ವರ್ಷಗಳು ಕಳೆದಿದೆ. ಹತ್ತು ವರ್ಷಗಳಾದ ನಂತರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಸೆಕ್ಷನ್ 11(1) ರಲ್ಲಿ ಹೇಳಲಾಗಿದ್ದು ಅದರ ಪ್ರಕಾರ ತೀರ್ಮಾನ ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

“ಈ ಹಿಂದಿನ ಸಮೀಕ್ಷೆ ಕುರಿತು ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಂದ ಆಕ್ಷೇಪಣೆ ಇತ್ತು. ಈ ಸಮೀಕ್ಷೆಯಲ್ಲಿ ಆ ಸಮುದಾಯಗಳಿಗೆ ಯಾವ ರೀತಿ ಭರವಸೆ ನೀಡಿರುವಿರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸೆಕ್ಷನ್ 11 ರಂತೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X