ಜಾತಿ ಗಣತಿ ವರದಿ | ಅ.18ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಸಿದ್ದರಾಮಯ್ಯ

Date:

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದಿಟ್ಟು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಮುಖಂಡರ ಜೊತೆ ಮುಖ್ಯಮಂತ್ರಿ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, “ಹೆಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ವರದಿ ಕೊಡಲು ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ಸಮಯ ನಿಗದಿ ಮಾಡಿದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಲಿಲ್ಲ. ಈಗ ನಮ್ಮ ಅವಧಿಯಲ್ಲಿ ವರದಿ ಜಾರಿಗೆ ಮನವಿ ಮಾಡಿದ್ದಾರೆ” ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕಾಂತರಾಜು ಅವರ ಬಳಿಕ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ವರದಿ ಜಾರಿಗೆ ಒತ್ತಾಯ ಇದೆ. ವಾರದ ಹಿಂದೆ ವರದಿ ಜಾರಿ ಮಾಡುವ ಬಗ್ಗೆ ಮಾತನಾಡಿದ್ದೆ. ಇಂದಿನ ಸಭೆಯಲ್ಲಿ ಭಾಗವಹಿಸಿ ಹಿಂದುಳಿದ ವರ್ಗಗಳ ನಾಯಕರು ಪಕ್ಷಾತೀತವಾಗಿ ಜಾತಿಗಣತಿ ವರದಿಯ ಜಾರಿಗೆ ಒತ್ತಾಯಿಸಿದ್ದಾರೆ. ಅ.10ರಂದು ನಡೆಯುವ ಸಂಪುಟ ಸಭೆಯ ಬದಲು ಅ.18ರ ಸಂಪುಟ ಸಭೆ ಮುಂದೆ ತಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಸಚಿವ ಸಂಪುಟ ಸಭೆ ಏನು ಹೇಳುತ್ತದೆಯೋ ಹಾಗೆ ಮಾಡುತ್ತೇವೆ. ಸಂಪುಟ ಸಭೆಯ ನಿರ್ಣಯದ ಪ್ರಕಾರ ಮುಂದಿನ ನಿರ್ಧಾರ” ಇರಲಿದೆ ಎಂದರು.

“ಇದು ಹಿಂದುಳಿದ ವರ್ಗಗಳ ಸಮೀಕ್ಷೆ ಮಾತ್ರ ಅಲ್ಲ. ಏಳು ಕೋಟಿ ಜನರ ಸಮೀಕ್ಷೆ. ದೇಶದಲ್ಲಿ‌ ಮೊದಲ ಬಾರಿಗೆ ಇಂಥ ಸಮೀಕ್ಷೆ ರಾಜ್ಯದಲ್ಲಿ ನಡೆದಿದೆ. ನಾನು ಈ ವರದಿ ನೋಡಿಲ್ಲ, ಓದಿಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...