ಜಾತಿ ಗಣತಿ ವರದಿ | ಅಭಿಪ್ರಾಯ ಸಂಗ್ರಹಣೆಗೆ ಸಚಿವ ಸಂಪುಟ ತೀರ್ಮಾನ

Date:

Advertisements

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಆಧಾರಿತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-2015 ವರದಿ (ಜಾತಿ ಗಣತಿ ವರದಿ) ಬಗ್ಗೆ ಚರ್ಚಿಸಲು ಇಂದು (ಏ.17) ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಮಹತ್ವದ ತೀರ್ಮಾನವಾಗಿಲ್ಲ.

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ದಿನದಿಂದಲೇ ‘ವರದಿ ಸ್ವೀಕರಿಸುವ ನನ್ನ ನಿರ್ಧಾರ ಅಚಲ’ ಎಂದು ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿಕೊಂಡೇ ಬಂದಿದ್ದರು. ಲೋಕಸಭೆ ಚುನಾವಣೆ ವೇಳೆ ವರದಿಯನ್ನು ಸಹ ಸ್ವೀಕರಿಸಿ, ಕಳೆದ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಓಪನ್‌ ಮಾಡಿದ್ದರು.

ನಂತರ ವರದಿ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಏ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಅತ್ತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ತುರ್ತು ಸಭೆಗಳನ್ನು ನಡೆಸಿ, ಜಾತಿ ಗಣತಿ ವರದಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಕಾಂಗ್ರೆಸ್‌ನ ಅಹಿಂದ ನಾಯಕರು ವರದಿ ಸಾರ್ವಜನಿಕವಾಗಿ ಬಹಿಂಗವಾಗಬೇಕು ಎಂದು ಆಗ್ರಹಿಸಿದ್ದರು.

Advertisements

ಈ ಎಲ್ಲ ಹಿನ್ನೆಲೆಯಲ್ಲಿ ಮಹತ್ವ ಪಡೆದಿದ್ದ ಗುರುವಾರದ ಸಚಿವ ಸಂಪುಟದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಚರ್ಚೆ ಅಷ್ಟೇ ನಡೆದಿದ್ದು, ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ವರದಿ ಜಾರಿಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಮುಂದಿನವಾರ ಸಭೆ ಸೇರಲು ನಿರ್ಧರಿಸಲಾಗಿದ್ದು, ಅಷ್ಟರೊಳಗೆ ಅಗತ್ಯವಿರುವ ಸಮಾಲೋಚನೆ ಸಭೆಗಳನ್ನು ಮುಗಿಸಿ, ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿಗಳು ಎಲ್ಲ ಸಚಿವರಿಂದ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ” ಎಂದರು.

ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ

“ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ” ಎಂದು ತಿಳಿಸಿದರು.

“ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳನ್ನು ಚರ್ಚಿಸಿದ್ದೇವೆ” ಎಂದು ಸಚಿವರು ಪುನರುಚ್ಚರಿಸಿದರು.

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆ

“ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದರು. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ.ವರದಿ ಮಂಡನೆಯಾಗಿ ಚರ್ಚೆ ನಡೆದಿದೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X