ನಾಳೆ ಜಾತಿ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

Date:

ಕರ್ನಾಟಕದ ಸಾಮಾಜಿಕ-ಆರ್ಥಿಕ ಸಮೀಕ್ಷೆ ಎಂದೇ ಪರಿಗಣಿತವಾಗಿರುವ ಜಾತಿ ಸಮೀಕ್ಷೆಯ ವರದಿಯನ್ನು ನಾಳೆ(ಫೆ.28) ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮವೊಂದಕ್ಕೆ ಮಾತನಾಡುತ್ತಿದ್ದ ಅವರು, “ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯನವರ ಭೇಟಿಗೆ ಸಮಯ ಕೇಳಿದ್ದೇವೆ. ಕೊಡುವುದಾಗಿ ತಿಳಿಸಿದ್ದಾರೆ. ಸ್ಥಳ ಇನ್ನೂ ನಿಗದಿಯಾಗಿಲ್ಲ. ಸ್ಥಳ ನಿಗದಿಯಾದ ಬಳಿಕ ಭೇಟಿ ಮಾಡಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

“ನಮ್ಮ ವರದಿಯನ್ನು ಈಗಾಗಲೇ ತಯಾರು ಮಾಡಿ ಆಗಿದೆ. ಮುದ್ರಣದ ಕೆಲಸ ಕೂಡ ಮುಗಿದಿದೆ. ಸರ್ಕಾರಕ್ಕೆ ಸಲ್ಲಿಸಲಷ್ಟೇ ಬಾಕಿ ಇದೆ. ಇದು ಹಿಂದುಳಿದ ವರ್ಗಗಳ ಆಯೋಗದ ವರದಿ” ಎಂದು ತಿಳಿಸಿದರು.

“ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿರಲಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ನಮ್ಮ ವರದಿಯಲ್ಲಿ ಏನಿದೆ ಎಂಬ ಅಂಶವನ್ನು ನಾವು ಬಹಿರಂಗಪಡಿಸುವಂತಿಲ್ಲ. ಅದು ಸರ್ಕಾರದ ಕೆಲಸ. ನಮ್ಮ ಕೆಲಸ ವರದಿ ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುವುದಷ್ಟೇ. ಆಯೋಗದ ಎಲ್ಲ ಸದಸ್ಯರು ಈ ಸಂದರ್ಭದಲ್ಲಿ ಜೊತೆಗಿರಲಿದ್ದಾರೆ” ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಪ್ರಸ್ತುತ ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ಆಯೋಗದ ಕಾರ್ಯಾವಧಿಯು ಫೆ.29ಕ್ಕೆ ಕೊನೆಗೊಳ್ಳಲಿದೆ. ಈ ಆಯೋಗವು ಎಚ್‌. ಕಾಂತರಾಜ್ ನೇತೃತ್ವದ ಆಯೋಗ ಸಿದ್ಧಪಡಿಸಿದ ವರದಿಯ ದತ್ತಾಂಶಗಳನ್ನು ಬಳಸಿಕೊಂಡು ಪರಿಷ್ಕೃತ ವರದಿ ಸಿದ್ಧಪಡಿಸಿದೆ. ಲೋಕಸಭೆ ಚುನಾವಣೆ ಇರುವುದರಿಂದ ಸರ್ಕಾರವು ವರದಿ ಸ್ವೀಕರಿಸಿದ ನಂತರ ಮುಂದೆ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮನೆ ಮೂಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI)...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೆ ಪಟ್ಟು; ಸೆ.26ರಿಂದ ದೇಶಾದ್ಯಂತ ಪ್ರತಿಭಟನೆಗೆ ಎಡಪಕ್ಷಗಳು, SIR ವಿರೋಧಿ ಒಕ್ಕೂಟ ಕರೆ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತ್ರೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ...