ತೆಲಂಗಾಣದಲ್ಲಿ ಜಾತಿ ಗಣತಿ; ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

Date:

Advertisements

ತೆಲಂಗಾಣ ವಿಧಾನಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಜಾತಿವಾರು ಜಾತಿಗಣತಿ ನಡೆಸುವ ನಿರ್ಣಯ ಮಂಡಿಸಿದ್ದಾರೆ. ನಿರ್ಣಯದ ನಗ್ಗೆ ಸದನದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿಪಕ್ಷ ಬಿಆರ್‌ಎಸ್‌ ಕೂಡ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದೆ.

“ಸದನವು ಇಡೀ ತೆಲಂಗಾಣ ರಾಜ್ಯದ ವಿವಿಧ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಮಗ್ರ ಮನೆ-ಮನೆ ಸಮೀಕ್ಷೆಯನ್ನು (ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆ) ತೆಗೆದುಕೊಳ್ಳಲು ನಿರ್ಧರಿಸುತ್ತದೆ” ಎಂದು ಸದನದಲ್ಲಿ ಸಚಿವ ಪ್ರಭಾಕರ್ ಹೇಳಿದ್ದಾರೆ.

“ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಜಾಗೂ ಪರಿಶಿಷ್ಟ ಪಂಗಡಗಳ ಸುಧಾರಣೆಗಾಗಿ ಸಾಮಾಜಿಕ ಶೈಕ್ಷಣಿಕ, ಉದ್ಯೋಗ ಹಾಗೂ ರಾಜಕೀಯ ಅವಕಾಶಗಳನ್ನು ಭಾರತ ಸಂವಿಧಾನದ ಅನುಚ್ಛೇದ 15ರ (4) ಮತ್ತು (5), ಅನುಚ್ಛೇದ 16ರ  ಕಲಂ (4), ಅನುಚ್ಛೇದ 38, 39 , 243ಡಿ (6) ಮತ್ತು 243ಟಿ (6)ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ.

Advertisements

ನಿರ್ಣಯದ ಕುರಿತು ಮಾತನಾಡಿದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, “ಜಾತಿ ಗಣತಿ ನಡೆಸುವ ಬಗ್ಗೆ ಎಲ್ಲ ಸದಸ್ಯರು ತಮ್ಮ ಸಲಹೆಗಳನ್ನು ನೀಡಬೇಕು” ಎಂದು ಮನವಿ ಮಾಡಿದರು.

ಉಪಮುಖ್ಯಮಂತ್ರಿ ಮಲ್ಲು ಬ್ಯಾಹಟ್ಟಿ ವಿಕ್ರಮಾರ್ಕ ಮಾತನಾಡಿ, “ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಜಾತಿಗಣತಿ ಮಾಡುತ್ತಿದ್ದೇವೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಜಾತಿ ಗಣತಿ ಅಡಿಗಲ್ಲು ಇದ್ದಂತೆ” ಎಂದರು.

ನಿರ್ಣಯವನ್ನು ಸ್ವಾಗತಿಸಿದ ಬಿಆರ್‌ಎಸ್ ಸದಸ್ಯ ಕೆ ಶ್ರೀಹರಿ, “ಜಾತಿ ಗಣತಿ ಬದಲು ಹಿಂದುಳಿದ ವರ್ಗಗಳ ಜನಗಣತಿ ಎಂದು ನಿರ್ಣಯದಲ್ಲಿ ನಮೂದಿಸಬೇಕಿತ್ತು. ಜಾತಿ ಗಣತಿ ಎಂಬ ಪದ ಗೊಂದಲ ಮೂಡಿಸಿದೆ” ಎಂದರು.

ಶ್ರೀಹರಿಗೆ ಉತ್ತರಿಸಿದ ವಿಕ್ರಮಾರ್ಕ, “ಯಾವುದೇ ಗೊಂದಲವಿಲ್ಲ, ಗಣತಿ ಎಲ್ಲರಿಗೂ ಸಹಕಾರಿಯಾಗಲಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X