ಜಾತಿ ಜನಗಣತಿ | ಅನ್ಯಾಯವಾದವರಿಗೆ ನ್ಯಾಯ ಒದಗಿಸುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್‌

Date:

Advertisements

ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಅಭಯ ಆಂಜನೇಯ ಸ್ವಾಮಿ, ಪ್ರಸನ್ನ ಮಹಾಗಣಪತಿ ಮತ್ತು ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಹಾಗೂ ಲೋಕಾರ್ಪಣಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾತಿನ ಬಗ್ಗೆ ಕೇಳಿದಾಗ, “ಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ” ಎಂದರು.

Advertisements

ನಾನು ಪಂಡಿತನೂ ಅಲ್ಲ, ಸರ್ವಜ್ಞನೂ ಅಲ್ಲ

ಒಕ್ಕಲಿಗ ಶಾಸಕರ ಸಭೆ ಬಗ್ಗೆ ಕೇಳಿದಾಗ, “ನಾನು ಈ ಸಮಾಜದ ಪ್ರತಿನಿಧಿಯಾಗಿ, ಸಚಿವ ಸಂಪುಟ ಸಭೆಯಲ್ಲಿ ನಮ್ಮ ವಿಚಾರವನ್ನು ಹೇಗೆ ಮಂಡಿಸಬೇಕು, ಯಾವ ರೀತಿ ಸಲಹೆ ನೀಡಬೇಕು ಎಂದು ಚರ್ಚೆ ಮಾಡಬೇಕಲ್ಲವೇ? ಏಕಾಏಕಿ ನಾನೊಬ್ಬನೇ ಸರ್ವಜ್ಞನಲ್ಲ. ದೊಡ್ಡ ಪಂಡಿತನೂ ಅಲ್ಲ. ನಾನು ಹಳ್ಳಿಯಿಂದ ಬಂದು ಬೆಂಗಳೂರು ಸೇರಿರುವವನು. ಹಿರಿಯರು, ಸ್ನೇಹಿತರು, ಶಾಸಕರ ಅನುಭವ, ತಮ್ಮ ಕ್ಷೇತ್ರಗಳಲ್ಲಿ ಜನ ಏನು ಹೇಳುತ್ತಿದ್ದಾರೆ, ಮಾಧ್ಯಮಗಳು ನೀಡಿರುವ ವರದಿ ಎಲ್ಲವನ್ನು ಚರ್ಚೆ ಮಾಡಿ ಅವಲೋಕಿಸಿ ಚರ್ಚೆ ಮಾಡಬೇಕಿದೆ. ನಾನು ಈ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವವನಲ್ಲ” ಎಂದು ತಿಳಿಸಿದರು.

ಜಾತಿಗಣತಿ ವಿಚಾರವಾಗಿ ನಿರ್ಮಲಾನಂದ ಶ್ರೀಗಳ ಜತೆ ಚರ್ಚೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಇಲ್ಲಾ” ಎಂದು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಯೋಗ್ಯರು ಎಂಬ ನಿರ್ಮಲಾನಂದ ಶ್ರೀಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಈಗ ನಾನು ಆ ವಿಚಾರವಾಗಿ ಚರ್ಚೆ ಮಾಡಲು ಹೋಗುವುದಿಲ್ಲ. ನನಗೆ ನೀವುಗಳು (ಮಾಧ್ಯಮಗಳು) ಆಶೀರ್ವಾದ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X