ಜಾನುವಾರು ವ್ಯಾಪಾರಿ ಸಾವು ಪ್ರಕರಣ; ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸಿ: ಕಾಂಗ್ರೆಸ್ ಆಗ್ರಹ

Date:

- Advertisement -
  • ವ್ಯಾಪಾರಿ ಸಾವಿನ ಹಿಂದೆ ಬಿಜೆಪಿ ಕೈವಾಡದ ಶಂಕೆ ವ್ಯಕ್ತಪಡಿಸಿದ ಕಾಂಗ್ರೆಸ್
  • ಇದು ಸುಪಾರಿ ಕೊಲೆಯೋ ಅಥವಾ ಪ್ರಾಯೋಜಿತ ಕೊಲೆಯೋ ಎಂದ ವಿಪಕ್ಷ

ಸಾತನೂರಿನಲ್ಲಿನ ಜಾನುವಾರು ವ್ಯಾಪಾರಿ ಸಾವಿನ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸುವಂತೆ ವಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದೆ. ಜಾನುವಾರು ಸಾಗಣೆ ವಾಹನದ ಚಾಲಕನನ್ನು ಕೊಲೆಗೈದ ಪುಢಾರಿ ಕಮಲ ಪಕ್ಷದ ನಾಯಕರೊಂದಿಗೆ ಖಾಸಾ ಸಂಬಂಧ ಹೊಂದಿದ್ದಾನೆ ಎಂದು ದೂರಿದೆ.

‘ಚುನಾವಣೆಯ ಹಿನ್ನೆಲೆಯಲ್ಲಿ ಗಲಭೆ ಎಬ್ಬಿಸಲು ಈ ಕೊಲೆಗೆ ರಾಜ್ಯ ಬಿಜೆಪಿ ನಾಯಕರೇ ಸುಪಾರಿ ನೀಡಿದ್ದರೇ?’ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ‘ಇದು ಭಾರತೀಯ ಜನತಾ ಪಕ್ಷದ ಪ್ರಾಯೋಜಿತ ಕೊಲೆಯೇ?’ ಎಂದು ಕೇಳಿದೆ.

ಜೊತೆಗೆ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪೋಲಿಸರು ಆತನೊಂದಿಗೆ ನಿಕಟ ಸಂಬಂಧವಿರುವ ಕಮಲ ಪಕ್ಷದ ನಾಯಕರನ್ನೂ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? :ಸಾತನೂರು | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ

ಘಟನೆ ಹಿನ್ನೆಲೆ

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ (38) ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹವರ್ತಿಗಳು ಇದೇ ಸ್ಥಳದಲ್ಲಿ ಜಾನುವಾರುಗಳ ರಕ್ಷಣೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು
ಹೇಳಲಾಗಿತ್ತು. ಅದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಮುಂದಾಗಿದ್ದ ರಾಮನಗರ ಪೊಲೀಸರು ಭಾನುವಾರ ಮಧ್ಯಾಹ್ನದ ವೇಳೆಗೆ ಘಟನೆ ಹಿಂದಿನ ರೂವಾರಿ, ಪ್ರಮುಖ ಆರೋಪಿ, ಬಲಪಂಥೀಯ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಕೈವಾಡ ಇರುವುದನ್ನು ಖಾತರಿ ಪಡಿಸಿಕೊಂಡಿದ್ದರು.

ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಪುನೀತ್‌ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ರಾಮನಗರ ಜಿಲ್ಲೆ ಸಾತನೂರು ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

ಘಟನೆ ಖಂಡಿಸುವುದರ ಜೊತೆಗೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕನಕಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಎದುರು ಇಂದು (ಭಾನುವಾರ) ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಂಬಂಧಿಕರು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...