ಕಾವೇರಿ ವಿವಾದ | ಕಲಾವಿದರನ್ನು ಹಿಂಸಿಸುವುದು ತಪ್ಪು; ಬಹುಭಾಷಾ ನಟ ಪ್ರಕಾಶ್ ರಾಜ್

Date:

  • ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದಿದ್ದ ಕರವೇ ನಡೆಗೆ ಕ್ಷಮೆ ಕೇಳಿದ ಪ್ರಕಾಶ್ ರಾಜ್
  • ‘ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ’ ಎಂದ ನೆಟ್ಟಿಗರು

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ ನಟ ಪ್ರಕಾಶ್​ ರಾಜ್​ ಖಂಡಿಸಿದ್ದಲ್ಲದೇ, ಕನ್ನಡಿಗರ ಪರವಾಗಿ ಸಿದ್ದಾರ್ಥ್ ಕ್ಷಮೆ ಕೋರಿದ್ದಾರೆ.

ತನ್ನ ಅಭಿನಯದ ಚಿಕ್ಕು ಚಿತ್ರದ ಕನ್ನಡ ಡಬ್ಬಿಂಗ್ ಮಾಡಿರುವ ಹಿನ್ನೆಲೆಯಲ್ಲಿ ಅದರ ಪ್ರಚಾರಕ್ಕೆಂದು ನಟ ಸಿದ್ಧಾರ್ಥ್​ ನಿನ್ನೆ (ಸೆ.28) ಬೆಂಗಳೂರಿಗೆ ಬಂದಿದ್ದರು. ನಗರದ ಖಾಸಗಿ ಪ್ರದೇಶವೊಂದರಲ್ಲಿ ಸಿನಿಮಾ ಪ್ರಚಾರದ ನಿಮಿತ್ತ ಸುದ್ದಿಗೋಷ್ಠಿ ನಡೆಸುವಾಗ ಅಲ್ಲಿಗೆ ಮಧ್ಯ ಪ್ರವೇಶ ಮಾಡಿದ್ದ ಕರವೇ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು, ನಟ ಸಿದ್ಧಾರ್ಥ್​ ಅವರನ್ನು ಬಲವಂತವಾಗಿ ಸುದ್ದಿಗೋಷ್ಠಿಯನ್ನು ನಿಲ್ಲಿಸುವಂತೆ ಸೂಚಿಸಿ, ಹೊರಗಡೆ ಕಳುಹಿಸಿದ್ದ ಘಟನೆ ನಡೆದಿತ್ತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ನಡೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದಶಕಗಳಷ್ಟು ಹಳೆಯದಾದ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿರುವ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಒತ್ತಡ ಹಾಕದ ಉಪಯೋಗಕ್ಕೆ ಬಾರದ ಸಂಸದರನ್ನು ಪ್ರಶ್ನಿಸುವ ಬದಲು, ಜನಸಾಮಾನ್ಯ ಹಾಗೂ ಕಲಾವಿದರಿಗೆ ತೊಂದರೆ ಕೊಡುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡಿಗನಾಗಿ, ಕನ್ನಡಿಗರ ಪರವಾಗಿ ಕ್ಷಮೆ ಇರಲಿ” ಎಂದು ನಟ ಸಿದ್ಧಾರ್ಥ್​ ಕ್ಷಮೆಯಾಚಿಸಿದ್ದಾರೆ.

ಕಾವೇರಿ ವಿಚಾರವಾಗಿ ಕನ್ನಡಪರ ಸಂಘಟನೆಗಳು ಮಾಡಿರುವ ಈ ಕ್ರಮಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡ ಸಿನಿಮಾಗಳು ಇಂದು ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗುತ್ತಿವೆ. ಕೆಜಿಎಫ್, ಕಾಂತಾರ ರೀತಿಯ ಚಿತ್ರಗಳನ್ನು ಬೇರೆ ಭಾಷಿಕರೂ ಗೆಲ್ಲಿಸಿದ್ದಾರೆ. ನಾಳೆ ಇದೇ ರೀತಿ ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ” ಎಂದು ಕೆಲವು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ...

ಜಪ್ತಿಯಾದ 2 ಕೋಟಿ ರೂ. ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

"ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು...

ಬೆಂಗಳೂರು | ಬಿಜೆಪಿಗೆ ಸೇರಿದ 2 ಕೋಟಿ ಹಣವನ್ನು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು: ಎಫ್‌ಐಆರ್

ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ...