ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿತ್ತಿದೆ. ಹೀಗಾಗಿ, ಸೆ.26ರಂದು ಬೆಂಗಳೂರು ಬಂದ್ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಮುಖಂಡರು ಕರೆ ಕೊಟ್ಟಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಬ್ರಿಟೀಷರ ಕಾಲದಿಂದಲೂ ಅನ್ಯಾಯವಾಗುತ್ತಿದೆ. ಹೀಗಾಗಿ, ಇದನ್ನು ಖಂಡಿಸಿ ಸೆ.26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಯಲಿದೆ. ಹಾಗಾಗಿ, ಎಲ್ಲ ಶಾಲಾ-ಕಾಲೇಜು, ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಐಟಿ ಕಂಪೆನಿಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಬೆಂಬಲ ನೀಡಬೇಕು ಎಂದು ತಿಳಿಸಿದ್ದಾರೆ.
ಸೆ.26ರಂದು ಬೆಂಗಳೂರು ಬಂದ್ ವೇಳೆ ಬೆಳಗ್ಗೆ 11 ಗಂಟೆಗೆ ಟೌನ್ಹಾಲ್ನಿಂದ ಮೈಸೂರು ಬ್ಯಾಂಕ್ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಕಾವೇರಿ ವಿವಾದದ ಬಗ್ಗೆ ಚರ್ಚೆ ನಡೆಸಲು ಸರ್ಕಾರವು ವಿಶೇಷ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.