ಕಾವೇರಿ ವಿವಾದ | ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

  • ಕರ್ನಾಟಕದ ಹಿತ ಕಾಪಾಡುವಲ್ಲಿ ನಮಗೆ ಬದ್ಧತೆ ಇದೆ ಎಂದ ಕೇಂದ್ರ ಸಚಿವ
  • ‘ತಮಿಳುನಾಡಿನ ಸಿಎಂ ಮೈತ್ರಿಕೂಟದ ಸಭೆಗೆ ಬೆಂಗಳೂರಿಗೆ ಬಂದಿದ್ದಾಗ ಯಾಕೆ ಮಾತನಾಡಿಲ್ಲ’

ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.

ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, “ಇಂಡಿಯಾ ಮೈತ್ರಿಕೂಟ ಗಟ್ಟಿಗೊಳಿಸಲು ತಮಿಳುನಾಡಿಗೆ ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು” ಎಂದು ಸಭೆಯಲ್ಲಿ ಹೇಳಿರುವುದಾಗಿ ತಿಳಿಸಿದ್ದಾರೆ.

ಸಿಡಬ್ಲ್ಯೂಎಂಎ ಸಭೆಯಲ್ಲಿ 2,500 ಕ್ಯೂಸೆಕ್ ನೀರು ಬಿಡಲು ಒಪ್ಪಿದ್ದು ಯಾರು? ಎಂದು ದಾಖಲೆ ತೋರಿಸಿದ ಕೇಂದ್ರ ಸಚಿವ ಜೋಶಿ, ಇದರಲ್ಲಿ ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದಾರೆ. ನೀವು ಆಗ ಕೊಡಲಿಕ್ಕೆ ಆಗಲ್ಲ ಎಂದವರು ಈಗ ಯಾಕೆ ಕೇಳಲಿಲ್ಲ. ನಮಗೆ ಕೊಟ್ಟ ಪತ್ರದಲ್ಲಿ ನೀರು ಬಿಡಲಿಕ್ಕೆ ಆಗುವುದಿಲ್ಲ ಎಂದು ಹೇಳಿ, ಸಿಡಬ್ಲ್ಯೂಎಂಎ ಸಭೆಯಲ್ಲಿ 2,500 ಕ್ಯೂಸೆಕ್ ನೀರು ಬಿಡಲು ಒಪ್ಪಿದ್ದಾರೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕರ್ನಾಟಕದ ಹಿತ ಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು. ಇಂಡಿಯಾ ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ದೀರಾ? ಆಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು.

ಇಂಡಿಯಾ ಮೈತ್ರಿಕೂಟದ ಡಿಎಂಕೆಯ ನಾಯಕರ ಜೊತೆಗೆ ಈ ಬಗ್ಗೆ ಎಷ್ಟು ಬಾರಿ ಚರ್ಚೆ ನಡೆಸಿದ್ದೀರಾ? ಮೈತ್ರಿಕೂಟದ ಸಭೆಗೆ ಬೆಂಗಳೂರಿಗೆ ತಮಿಳುನಾಡಿನ ಸಿಎಂ ಸ್ಟಾಲಿನ್ ಬೆಂಗಳೂರಿಗೆ ಬಂದಾಗ ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಕರ್ನಾಟಕ ರಾಜ್ಯದ ಹಿತಕಾಪಾಡುವಲ್ಲಿ ನಮಗೆ ಬದ್ಧತೆ ಇದೆ. ಹಾಗಾಗಿ ಕೇಂದ್ರದ ಮಂತ್ರಿಗಳ ಜೊತೆಗೆ ಮಾತನಾಡುತ್ತೇವೆ. ಸಭೆಯಲ್ಲಿ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೆಹಲಿಯಲ್ಲಿ ಹೇಳಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...