ನೀರು ಬಿಡಬಾರದು ಎನ್ನುವ ಪ್ರಶ್ನೆಯಲ್ಲ – ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲ ಒಂದು ಧ್ವನಿಯಾಗಿ ಗಟ್ಟಿಯಾಗಿ ನಿಲ್ಲಬೇಕು. ತಮಿಳುನಾಡಿಗೆ ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಕುರಿತು ದೆಹಲಿಯಲ್ಲಿ ನಡೆದ ಕೇಂದ್ರ ಸಚಿವರು ಮತ್ತು ಸರ್ವ ಪಕ್ಷಗಳ ಸಂಸದರ ಸಭೆಯಲ್ಲಿ ಅವರು ಮಾತನಾಡಿದರು. “ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ” ಎಂದು ಹೇಳಿದರು.

“ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ಕರ್ನಾಟಕದಲ್ಲಿ ಆಗಸ್ಟ್‌ ಬಳಿಕ ಮಳೆ ಬೀಳುವುದಿಲ್ಲ. ತಮಿಳುನಾಡಿನಲ್ಲಿ ಮಳೆಯಾಗುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

“ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಏಕೆಂದರೆ ನಮ್ಮಲ್ಲಿ ನೀರೇ ಇಲ್ಲ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ” ಎಂದರು.

ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವ ಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ. ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಪ್ರಸ್ತುತ ರಾಜ್ಯಕ್ಕೆ ಎದುರಾಗಿರುವ ಸಂದರ್ಭವನ್ನು ಆರಂಭದಲ್ಲಿ ಸಭೆಗೆ ವಿವರಿಸಿದರು.

ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು. ನಮ್ಮ ಅಧಿಕಾರಿಗಳು, ತಜ್ಞರು ಮತ್ತು ಕಾನೂನು ತಂಡ ಸಮರ್ಥವಾಗಿ ವಾಸ್ತವ ಪರಿಸ್ಥಿತಿಯನ್ನು CWMA ನಲ್ಲೂ ಪ್ರಸ್ತುತ ಪಡಿಸಿದ್ದಾರೆ.

ನಮಗೆ ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವ ನಿಟ್ಟಿನಲ್ಲಿ ಬೇಡಿಕೆ, ಒತ್ತಡಗಳನ್ನು ಮಂಡಿಸಬೇಕು. ನಮಗೆ ಸಮಸ್ಯೆ ಬಗೆಹರಿದು ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳುವುದಷ್ಟೆ ಮುಖ್ಯ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ವಿನಂತಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟ ತೀರ್ಮಾನದ ಬಗ್ಗೆ ಸಿಎಂ ವಿವರಿಸಿದ್ದೇನು?

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ...

ವಿಜಯಪುರ | ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಪುಸ್ತಕಗಳ ರಿಯಾಯಿತಿ ಮಾರಾಟ

ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ...

ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ

ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

Download Eedina App Android / iOS

X