ಕಾವೇರಿ ಜಲ ವಿವಾದ | ಸರ್ವ ಪಕ್ಷ ಸಭೆಯಲ್ಲಿ ಕಾನೂನು ಹೋರಾಟಕ್ಕೆ ಒಕ್ಕೊರಲಿನ ಬೆಂಬಲ

Date:

Advertisements
  • ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ : ಡಿಕೆ ಶಿವಕುಮಾರ್
  • ಶುಕ್ರವಾರ ಸುಪ್ರೀಂ ಕೋರ್ಟಿನಲ್ಲಿ ಮತ್ತೆ ವಿಚಾರಣೆ: ಅಡ್ವೊಕೇಟ್ ಜನರಲ್

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು.

ಕಾನೂನು ಹೋರಾಟಕ್ಕೆ ಒಕ್ಕೊರಲಿನ ಬೆಂಬಲ ವ್ಯಕ್ತವಾಗಿದ್ದು, ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ನೀರಾವರಿ ವಿಷಯಕ್ಕೆ ಸಂಬಂಧಿಸಿದದಂತೆ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಜಲ ವಿವಾದಗಳಿಗೆ ಸಂಬಂಧಿಸಿ ಸರ್ಕಾರದ ಕಾನೂನು ಹೋರಾಟ ಮುಂದುವರಿಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರು ಸಹಕಾರ ನೀಡುವಂತೆ ಕೋರಿದರು.

ಸಭೆ ಇನ್ನೂ ಕೂಡ ಮುಂದುವರಿದಿದ್ದು, ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್‌ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ ಎಂಬುದರ ಬಗ್ಗೆಯೂ ಚರ್ಚಿಸಲಾಗುತ್ತಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡರು.

ಬಳಿಕ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯ್ಲಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಸಚಿವರಾದ ಹೆಚ್‌.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣಭೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X