ಕಾವೇರಿ | ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 998 ಕ್ಯುಸೆಕ್‌ ನೀರು ಬಿಡುವಂತೆ ಸಿಡಬ್ಲ್ಯೂಎಂಎ ಶಿಫಾರಸು

Date:

ಕರ್ನಾಟಕವು ಫೆಬ್ರವರಿ ತಿಂಗಳಲ್ಲಿ ತಮಿಳುನಾಡಿಗೆ ಪ್ರತಿನಿತ್ಯವೂ 998 ಕ್ಯುಸೆಕ್‌ನಷ್ಟು ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯೂಎಂಎ) ಶಿಫಾರಸು ಮಾಡಿದೆ.

“ಕರ್ನಾಟಕದ ನಾಲ್ಕು ಜಲಾನಯನ ಪ್ರದೇಶಗಳಲ್ಲಿ ಜ.17ರವರೆಗೂ ಶೇ.52ರಷ್ಟು ಮಳೆ ಕೊರತೆ ಉಂಟಾಗಿದೆ. ಮೆಟ್ಟೂರು ಹಾಗೂ ಭವಾನಿ ಸಾಗರ ಜಲಾಶಯದಲ್ಲಿ 50.805 ಟಿಎಂಸಿಯಷ್ಟು ನೀರಿದೆ. ಇದು ತಮಿಳುನಾಡಿನ ನೀರಾವರಿ ಯೋಜನೆಗಳಿಗೆ ಸಾಕು” ಎಂದು ಕರ್ನಾಟಕ ವಾದ ಮಂಡಿಸಿತು.

“ತಮಿಳುನಾಡಿಗೆ ಆಗ್ನೇಯ ಮುಂಗಾರು ಮಾರುತ ಉತ್ತಮವಾಗಿದ್ದು, ಮೂರು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬಂದಿದೆ. ತಮಿಳುನಾಡಿಗೆ ಹೋಲಿಸಿದಲ್ಲಿ ಕರ್ನಾಟಕಕ್ಕೆ ಈ ಬಾರಿ ಮಳೆ ಕೊರತೆ ಎದುರಾಗಿದೆ. ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರು ಪೂರೈಕೆಗೆ ಸಮಸ್ಯೆ ಎದುರಾಗಿದೆ. ಹೀಗಾಗಿ ರಾಜ್ಯದ ಜಲಾಶಯಗಳಿಂದ ಇನ್ನೂ ಹೆಚ್ಚಿನ ನೀರು ಬಿಡುವುದು ಅಸಾಧ್ಯ” ಎಂದು ಸಮಿತಿ ಮುಂದೆ ಕರ್ನಾಟಕ ತನ್ನ ವಾದ ಮಂಡಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಕರ್ನಾಟಕವು ಜ. 19ರಿಂದ ಮೇವರೆಗೆ ಬಾಕಿ ಉಳಿದ 19 ಟಿಎಂಸಿ ನೀರು ಬಿಡಬೇಕು’ ಎಂದು ತಮಿಳುನಾಡು ಪಟ್ಟು ಹಿಡಿಯಿತು.

ಕಾವೇರಿ ಜಲವಿವಾದಗಳ ನ್ಯಾಯಮಂಡಳಿ ಆದೇಶವನ್ನು ಬದಲಿಸಿದ ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಂತಾರಾಜ್ಯ ಗಡಿ ಭಾಗದಲ್ಲಿರುವ ಬಿಳಿಗುಂಡ್ಲುಗೆ ಸೂಚಿಸಿದ ಪ್ರಮಾಣದಷ್ಟು ನೀರನ್ನು ಕರ್ನಾಟಕ ಬಿಡುಗಡೆ ಮಾಡಬೇಕು. 2024ರ ಜನವರಿಯಿಂದ ಫೆಬ್ರುವರಿವರೆಗೆ ತಮಿಳುನಾಡಿಗೆ ಒಟ್ಟು 1182 ಕ್ಯುಸೆಕ್ ನೀರು ಹರಿಸಬೇಕು. ಅದರಲ್ಲಿ ಜನವರಿಯಲ್ಲಿ 998 ಕ್ಯುಸೆಕ್ ನೀರನ್ನು ಪ್ರತಿದಿನ ಹರಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...

ಪಾಕಿಸ್ತಾನ ಜಿಂದಾಬಾದ್ | ಸದನದಲ್ಲಿ ಬಿಜೆಪಿ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ‌ ಎನ್ನಲಾಗಿರುವ ಪ್ರಕರಣವನ್ನು ರಾಜಕೀಯವಾಗಿ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ...