ಕೇಜ್ರಿವಾಲ್ ಬಂಗಲೆ ನಿರ್ಮಾಣದಲ್ಲಿ ಅಕ್ರಮ ಎಂದ ಸಿಬಿಐ; ಬಿಜೆಪಿಯ ಸೇಡು ಎಂದು ಎಎಪಿ ತಿರುಗೇಟು

Date:

ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನೂತನ ಅಧಿಕೃತ ನಿವಾಸ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮಗಳು ಮತ್ತು ಅವ್ಯವಹಾರಗಳ ಕುರಿತು ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಆದರೆ ದೆಹಲಿಯ ಆಡಳಿತಾರೂಢ ಎಎಪಿ ಈ ಆರೋಪವನ್ನು ತಿರಸ್ಕರಿಸಿದ್ದು, “ನಮ್ಮ ಪಕ್ಷವನ್ನು ಮುಗಿಸಲು ಬಿಜೆಪಿ ತನ್ನ ಎಲ್ಲ ಶಕ್ತಿಯನ್ನು ಬಳಸುತ್ತಿದೆ” ಎಂದು ವಾಗ್ದಾಳಿ ನಡೆಸಿದೆ.

ದೆಹಲಿ ಸರ್ಕಾರದ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಕಾಲೇಜಿನಲ್ಲಿ ಟೋಪಿ ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕನಿಗೆ ಥಳಿತ

ಸಿಬಿಐನ ಭ್ರಷ್ಟಾಚಾರ ನಿಗ್ರಹ ಶಾಖೆಯು ಟೆಂಡರ್ ದಾಖಲೆಗಳು, ಗುತ್ತಿಗೆದಾರರು ಸಲ್ಲಿಸಿದ ಬಿಡ್‌ಗಳು, ಕಟ್ಟಡ ಯೋಜನೆಗಳ ಅನುಮೋದನೆ ಮತ್ತು ಮಾಡ್ಯುಲರ್ ಕಿಚನ್‌ನಂತಹ ಉನ್ನತ ವಿಶೇಷಣಗಳಿಗಾಗಿ ಕ್ಲೈಂಟ್‌ನಿಂದ ಪಡೆದ ವಿನಂತಿಗಳು, ಅಧಿಕಾರಿಗಳ ಅನುಮೋದನೆ ಮತ್ತು ಶಿಫಾರಸುಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.

ಇದು ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಪಕ್ಷ ಜನರಿಗಾಗಿ ಕೆಲಸ ಮಾಡುವುದನ್ನು ತಡೆಯುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಎಎಪಿ ಆರೋಪಿಸಿದೆ.

“ದೇಶದ ಅತ್ಯುತ್ತಮ ಆರೋಗ್ಯ ಮತ್ತು ಶಿಕ್ಷಣ ಸಚಿವರಾದ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಕಂಬಿ ಹಿಂದೆ ಹಾಕಲು ಸಹ ಇದೇ ಕಾರಣ” ಎಂದು ಆಪ್ ಆಕ್ರೋಶ ವ್ಯಕ್ತಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...